ಪರಿಶುದ್ದ ಬೈಬಲ್ 1997
|
| 1 |
| ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು. |
| 2 |
| ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗೆಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ. |
| 3 |
| ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ. |
| 4 |
| ಎಜ್ರನೇ, ಎದ್ದೇಳು, ಇದು ನಿನ್ನ ಜವಾಬ್ದಾರಿಕೆ. ನಾವು ನಿನ್ನನ್ನು ಬೆಂಬಲಿಸುತ್ತೇವೆ; ಧೈರ್ಯದಿಂದ ಈ ಕೆಲಸವನ್ನು ಪ್ರಾರಂಭಿಸು.” |
| 5 |
| ಎಜ್ರನು ಎದ್ದುನಿಂತು ಮಹಾಯಾಜಕರೂ, ಲೇವಿಯರೂ ಮತ್ತು ಇಸ್ರೇಲಿನ ಜನರೂ ಅವನು ಹೇಳಿದ ಪ್ರಕಾರ ಮಾಡುತ್ತೇವೆ ಎಂಬ ಪ್ರತಿಜ್ಞೆಯನ್ನು ಅವರಿಂದ ತೆಗೆದುಕೊಂಡನು. |
| 6 |
| ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು. |
| 7 |
| ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು. |
| 8 |
| ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು. |
| 9 |
| ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು. |
| 10 |
| ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ. |
| 11 |
| ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.” |
| 12 |
| ಆಗ ಅಲ್ಲಿ ನೆರೆದುಬಂದವರೆಲ್ಲರೂ ಗಟ್ಟಿಯಾಗಿ ಎಜ್ರನಿಗೆ ಉತ್ತರಿಸುತ್ತಾ, “ಎಜ್ರನೇ, ನೀನು ಸರಿಯಾಗಿ ಹೇಳಿರುವೆ! ನೀನು ಹೇಳಿದಂತೆಯೇ ನಾವು ಮಾಡಬೇಕು. |
| 13 |
| ಆದರೆ ಇಲ್ಲಿ ಹೆಚ್ಚು ಜನರು ಸೇರಿಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ. |
| 14 |
| ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು. |
| 15 |
| ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು. |
| 16 |
| ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು. |
| 17 |
| ಮೊದಲನೇ ತಿಂಗಳಿನ ಮೊದಲನೆಯ ದಿನದಲ್ಲಿ ಎಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರ ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಮುಗಿಸಿದರು. |
| 18 |
| ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ. |
| 19 |
| ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು. |
| 20 |
| ಇಮ್ಮೇರನ ಸಂತತಿಯವರಲ್ಲಿ ಹನಾನೀ, ಜೆಬದ. |
| 21 |
| ಹಾರೀಮನ ಸಂತತಿಯವರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ. |
| 22 |
| ಪಷ್ಹೂರನ ಸಂತತಿಯವರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ. |
| 23 |
| ಲೇವಿಯವರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್, ಇವರೆಲ್ಲಾ ಅನ್ಯಸ್ತ್ರೀಯರನ್ನು ವಿವಾಹ ಮಾಡಿಕೊಂಡಿದ್ದರು. |
| 24 |
| ಗಾಯಕರಲ್ಲಿ ಎಲ್ಯಾಷೀಬ್ ಎಂಬವನು ಅನ್ಯಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್ ಮತ್ತು ಊರೀ. |
| 25 |
| ಇಸ್ರೇಲ್ ಜನಾಂಗದವರಿಂದ ಪರೋಷನ ಸಂತಾನದಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ ಮತ್ತು ಬೆನಾಯ. |
| 26 |
| ಏಲಾಮನ ಸಂತತಿಯವರಲ್ಲಿ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ. |
| 27 |
| ಜತ್ತೂವಿನ ಸಂತತಿಯವರಲ್ಲಿ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ್ ಮತ್ತು ಅಜೀಚಾ. |
| 28 |
| ಬೇಬೈಯ ಸಂತತಿಯಿಂದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ. |
| 29 |
| ಬಾನೀ ಸಂತತಿಯಿಂದ ಮೆಷುಲ್ಲಾಮ್, ಮಲ್ಲೂಕ್, ಆದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್. |
| 30 |
| ಪಹತ್ ಮೋವಾಬನ ಸಂತತಿಯಿಂದ ಆದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ. |
| 31 |
| ಹಾರೀಮ್ನ ಸಂತತಿಯಿಂದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್, |
| 32 |
| ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ. |
| 33 |
| ಹಾಷುಮನ ಸಂತತಿಯಿಂದ ಮತ್ತೆನೈ, ಮತ್ತತ್ತ, ಜಾಬಾದ್, ಎಲಿಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ. |
| 34 |
| ಬಾನೀಯ ಸಂತತಿಯಿಂದ ಮಾದೈ, ಅಮ್ರಾಮ್, ಊವೇಲ್, |
| 35 |
| ಬೆನಾಯ, ಬೇದೆಯ, ಕೆಲೂಹು, |
| 36 |
| ವನ್ಯಾಹ, ಮೆರೇಮೊತ್, ಎಲ್ಯಾಷೀಬ್, |
| 37 |
| ಮತ್ತನ್ಯ, ಮತ್ತನೈ ಮತ್ತು ಯಾಸೈ. |
| 38 |
| ಬಿನ್ನೂಯಿಯ ಸಂತತಿಯವರಿಂದ ಯಾರೆಂದರೆ: ಶಿಮ್ಮೀ, |
| 39 |
| ಶೆಲೆಮ್ಯ, ನಾತಾನ್, ಆದಾಯ, |
| 40 |
| ಮಕ್ನದೆಬೈ, ಶಾಷೈ, ಶಾರೈ. |
| 41 |
| ಅಜರೇಲ್, ಶೆಲೆಮ್ಯ, ಶೆಮರ್ಯ, |
| 42 |
| ಶಲ್ಲೂಮ್, ಅಮರ್ಯ ಮತ್ತು ಯೋಸೇಫ್. |
| 43 |
| ನೆಬೋನ ಸಂತತಿಯಿಂದ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ. |
| 44 |
| ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು. |
|
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/ezra/010.mp3
10
10