ಪರಿಶುದ್ದ ಬೈಬಲ್ 1997
|
| 1 |
| ಬಳಿಕ ಶೂಹ ದೇಶದ ಬಿಲ್ದದನು ಉತ್ತರಕೊಟ್ಟನು: |
| 2 |
| “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು. |
| 3 |
| ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು. |
| 4 |
| ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ. |
| 5 |
| ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ. |
| 6 |
| ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!” |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/job/025.mp3
42
25