|
| 1 |
|
| ಬಳಿಕ ಶೂಹ ದೇಶದ ಬಿಲ್ದದನು ಉತ್ತರಿಸಿದನು: |
|
| 2 |
|
| “ಇನ್ನೆಷ್ಟುಕಾಲ ಹೀಗೆ ಮಾತಾಡುವೆ? ನಿನ್ನ ಮಾತುಗಳು ಬೀಸುವ ಬಿರುಗಾಳಿಯಂತಿವೆ. |
|
| 3 |
|
| ದೇವರು ಅನ್ಯಾಯ ಮಾಡುವನೇ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವನೇ? |
|
| 4 |
|
| ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪ ಮಾಡಿದ್ದರಿಂದ ಆತನು ಅವರನ್ನು ಶಿಕ್ಷಿಸಿದ್ದಾನೆ. ಅವರ ಪಾಪಗಳಿಗಾಗಿ ಪ್ರತಿಫಲ ದೊರೆಯಿತು. |
|
| 5 |
|
| ಯೋಬನೇ, ಈಗಲಾದರೋ ದೇವರ ಕಡೆಗೆ ನೋಡು, ಕರುಣೆತೋರುವಂತೆ ಸರ್ವಶಕ್ತನಾದ ದೇವರಿಗೆ ಪ್ರಾರ್ಥಿಸು. |
|
| 6 |
|
| ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ. |
|
| 7 |
|
| ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು. |
|
| 8 |
|
| “ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಲಿತುಕೊಂಡದ್ದನ್ನು ತಿಳಿದುಕೊ. |
|
| 9 |
|
| ಯಾಕೆಂದರೆ, ನಾವು ಕೇವಲ ನಿನ್ನೆ ಹುಟ್ಟಿದವರಂತಿದ್ದೇವೆ. ನಮಗೇನೂ ಗೊತ್ತಿಲ್ಲ. ಭೂಮಿಯ ಮೇಲಿನ ನಮ್ಮ ದಿನಗಳು ನೆರಳಿನಂತೆ ಕ್ಷಣಿಕವಷ್ಟೇ. |
|
| 10 |
|
| ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.” |
|
| 11 |
|
| “ಜಂಬುಗಿಡವು ಜವುಗುಮಣ್ಣಿಲ್ಲದೆ ಎತ್ತರವಾಗಿ ಬೆಳೆಯಬಲ್ಲದೇ? ಜವುಗುಸಸ್ಯವು ನೀರಿಲ್ಲದೆ ಬೆಳೆಯಬಲ್ಲದೇ? |
|
| 12 |
|
| ನೀರು ಬತ್ತಿಹೋದರೆ ಅವು ಸಹ ಒಣಗಿಹೋಗುತ್ತವೆ. ಅವು ತುಂಬ ಎಳೆಯದಾಗಿರುವುದರಿಂದ ಕತ್ತರಿಸಿ ಉಪಯೋಗಿಸಲಾಗದು. |
|
| 13 |
|
| ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ. |
|
| 14 |
|
| ಅವನ ಭರವಸೆಯು ಬಹು ಬಲಹೀನವಾಗಿರುವುದು. ಅವನು ಜೇಡರಬಲೆಯ ಮೇಲೆ ಭರವಸವಿಡುವನು. |
|
| 15 |
|
| ಅವನು ಜೇಡರಬಲೆಯನ್ನು ಒರಗಿಕೊಳ್ಳುವನು, ಆದರೆ ಬಲೆಯು ಕಿತ್ತುಹೋಗುವುದು. ಅವನು ಜೇಡರಬಲೆಯನ್ನು ಹಿಡಿದುಕೊಳ್ಳುವನು, ಆದರೆ ಅದು ಅವನಿಗೆ ಆಧಾರ ನೀಡುವುದಿಲ್ಲ. |
|
| 16 |
|
| ಅವನು ಬೇಕಾದಷ್ಟು ನೀರನ್ನೂ ಬಿಸಿಲನ್ನೂ ಹೊಂದಿರುವ ಬಳ್ಳಿಯಂತಿರುವನು. ಆ ಬಳ್ಳಿಯ ಕವಲುಗಳು ತೋಟದಲ್ಲೆಲ್ಲಾ ಹರಡಿಕೊಳ್ಳುತ್ತವೆ. |
|
| 17 |
|
| ಅದು ಕಲ್ಲುಕುಪ್ಪೆಯ ಸುತ್ತಲೂ ತನ್ನ ಬೇರುಗಳನ್ನು ಹೆಣೆದುಕೊಂಡು ಕಲ್ಲುಗಳಲ್ಲಿ ಬೆಳೆಯಲು ಒಂದು ಸ್ಥಳಕ್ಕಾಗಿ ನೋಡುವುದು. |
|
| 18 |
|
| ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ. |
|
| 19 |
|
| ಆದ್ದರಿಂದ ಆ ಬಳ್ಳಿ ಹೊಂದಿರುವ ಸಂತೋಷವೆಲ್ಲಾ ಅಷ್ಟೇ. ಬಳಿಕ ಆ ಮಣ್ಣಿನಿಂದ ಇತರ ಸಸಿಗಳು ಬೆಳೆಯುತ್ತವೆ. |
|
| 20 |
|
| ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ. |
|
| 21 |
|
| ದೇವರು ಇನ್ನು ಮೇಲೆ ನಿನ್ನ ಬಾಯನ್ನು ನಗೆಯಿಂದಲೂ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದಲೂ ತುಂಬಿಸುವನು. |
|
| 22 |
|
| ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವಮಾನ ಮಾಡುವನು; ದುಷ್ಟರ ಮನೆಗಳನ್ನು ನಾಶಮಾಡುವನು.” |
|
|
|
|