|
| 1 |
|
| ಬಳಿಕ ಯೋಬನು ಪ್ರತ್ಯುತ್ತರವಾಗಿ ಹೀಗೆಂದನು: |
|
| 2 |
|
| “ಹೌದು, ನೀನು ಹೇಳಿದ್ದು ಸತ್ಯವೇ ಸರಿ! ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ? |
|
| 3 |
|
| ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು. |
|
| 4 |
|
| ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು. ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು. |
|
| 5 |
|
| ದೇವರು ಪರ್ವತಗಳನ್ನು ಅವುಗಳಿಗೇ ತಿಳಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುವನು. |
|
| 6 |
|
| ಆತನು ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುವನು; ಅದರ ಅಸ್ತಿವಾರಗಳನ್ನು ನಡುಗಿಸುವನು. |
|
| 7 |
|
| ಆತನು ಆಜ್ಞಾಪಿಸಿದರೆ, ಆತನ ಆಜ್ಞೆಯಂತೆಯೇ ಸೂರ್ಯೋದಯವಾಗದು. ನಕ್ಷತ್ರಗಳು ಪ್ರಕಾಶಿಸದಂತೆ ಆತನು ಅವುಗಳನ್ನು ಮುಚ್ಚಿಟ್ಟು ಮುದ್ರೆ ಹಾಕಬಲ್ಲನು. |
|
| 8 |
|
| ಆಕಾಶಮಂಡಲವನ್ನು ಸೃಷ್ಟಿಸಿದವನು ಆತನೇ. ಆತನು ಭೋರ್ಗರೆಯುತ್ತಿರುವ ಸಮುದ್ರದ ಮೇಲೆ ನಡೆಯಬಲ್ಲನು. |
|
| 9 |
|
| “ಆತನೇ ಬೇರ್, ಒರೈಯನ್ ಮತ್ತು ಪ್ಲೈಯಡ್ಸ್ ಎಂಬ ನಕ್ಷತ್ರಸಮೂಹಗಳನ್ನು ಸೃಷ್ಟಿಮಾಡಿದನು. ದಕ್ಷಿಣ ಆಕಾಶದಲ್ಲಿ ನಕ್ಷತ್ರವ್ಯೂಹಗಳನ್ನು ಸೃಷ್ಟಿಸಿದವನು ಆತನೇ. |
|
| 10 |
|
| ಗ್ರಹಿಸಲಶಕ್ಯವಾದ ಅದ್ಭುತಕಾರ್ಯಗಳನ್ನೂ ಅಸಂಖ್ಯಾತವಾದ ಮಹತ್ಕಾರ್ಯಗಳನ್ನೂ ಆತನು ಮಾಡುವನು. |
|
| 11 |
|
| ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು. |
|
| 12 |
|
| ದೇವರೇ ತೆಗೆದುಕೊಳ್ಳುವುದಾದರೆ, ಆತನನ್ನು ತಡೆಯಬಲ್ಲವರು ಯಾರು? ‘ನೀನು ಏನು ಮಾಡುತ್ತಿರುವೆ’ ಎಂದು ಆತನನ್ನು ಕೇಳುವವರು ಯಾರು? |
|
| 13 |
|
| ದೇವರು ತನ್ನ ಕೋಪವನ್ನು ತಡೆಹಿಡಿದುಕೊಳ್ಳುವುದಿಲ್ಲ. ರಹಬನ ಸಹಾಯಕರು ಸಹ ದೇವರ ಮುಂದೆ ಭಯದಿಂದ ಅಡ್ಡಬೀಳುವರು. |
|
| 14 |
|
| “ಆದ್ದರಿಂದ ನಾನು ದೇವರೊಂದಿಗೆ ವಾದ ಮಾಡಲಾರೆ. ಆತನಿಗೆ ಉತ್ತರ ಕೊಡುವುದಕ್ಕೂ ನಾನು ಅಶಕ್ತನಾಗಿರುವೆ. |
|
| 15 |
|
| ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು. |
|
| 16 |
|
| ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರ ಕೊಟ್ಟಿದ್ದರೂ ಈಗ ಆತನು ನನಗೆ ಕಿವಿಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ. |
|
| 17 |
|
| ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಗಳನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು. |
|
| 18 |
|
| ಉಸಿರೆಳೆದುಕೊಳ್ಳಲೂ ಬಿಡುವು ನೀಡದೆ ಕಷ್ಟದ ಮೇಲೆ ಕಷ್ಟವನ್ನು ಕೊಡುವನು. |
|
| 19 |
|
| ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣವೆಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು? |
|
| 20 |
|
| ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು. |
|
| 21 |
|
| ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು. |
|
| 22 |
|
| ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ” ಎಂಬುದು ನನ್ನ ಆಲೋಚನೆ. |
|
| 23 |
|
| ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾ ನಗುವನೇ? |
|
| 24 |
|
| ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು? |
|
| 25 |
|
| ನನ್ನ ದಿನಗಳು ಓಟಗಾರನಿಗಿಂತಲೂ ವೇಗವಾಗಿ ಹೋಗುತ್ತಿವೆ. ಸುಖವಿಲ್ಲದ ನನ್ನ ದಿನಗಳು ಹಾರಿಹೋಗುತ್ತಿವೆ. |
|
| 26 |
|
| ಜಂಬುಗಿಡದಿಂದ ಮಾಡಿದ ದೋಣಿಗಳಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗಲು ಹಾರಿಹೋಗುವಂತೆಯೂ ನನ್ನ ದಿನಗಳು ವೇಗವಾಗಿ ಹೋಗುತ್ತಿವೆ. |
|
| 27 |
|
| “ನಾನು ದೂರು ಹೇಳುವುದಿಲ್ಲ. ನನ್ನ ನೋವನ್ನು ಮರೆತು ನನ್ನ ಮುಖವನ್ನು ಮಾರ್ಪಡಿಸಿಕೊಂಡು ನಗುವೆನೆಂದರೆ, |
|
| 28 |
|
| ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ. |
|
| 29 |
|
| ಅಪರಾಧಿಯೆಂದು ಈಗಾಗಲೇ ನನಗೆ ತೀರ್ಪಾಗಿದೆ. ಹೀಗಿರಲು ನಾನೇಕೆ ವ್ಯರ್ಥ ಪ್ರಯತ್ನ ಮಾಡಲಿ? |
|
| 30 |
|
| ನಾನು ಹಿಮದಿಂದ ಸ್ನಾನಮಾಡಿದರೂ ಸಾಬೂನಿನಿಂದ ಕೈತೊಳೆದುಕೊಂಡರೂ |
|
| 31 |
|
| ದೇವರು ನನ್ನನ್ನು ಮಣ್ಣಿನ ಗುಂಡಿಗೆ ತಳ್ಳಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯವಾಗುವಂತೆ ಮಾಡುವನು. |
|
| 32 |
|
| “ದೇವರು ನನ್ನಂಥ ಮನುಷ್ಯನಲ್ಲ. ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು. |
|
| 33 |
|
| ನಮ್ಮಿಬ್ಬರಿಗೆ ಮಧ್ಯಸ್ಥಗಾರನಿದ್ದರೆ, ನಮ್ಮಿಬ್ಬರ ಮೇಲೆ ಅಧಿಕಾರವುಳ್ಳವನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. (ಆದರೆ ಅಂಥವರು ಯಾರೂ ಇಲ್ಲ.) |
|
| 34 |
|
| ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ಥಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ. |
|
| 35 |
|
| ಆಗ ನಾನು ಭಯವಿಲ್ಲದೆ ಮಾತಾಡುತ್ತಿದ್ದೆನು; ಆದರೆ ಈಗ ನನಗೆ ಸಾಧ್ಯವೇ ಇಲ್ಲ.” |
|
|
|
|