ಪರಿಶುದ್ದ ಬೈಬಲ್ 1997
|
| 1 |
| ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು. |
| 2 |
| ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು. |
| 3 |
| ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು. |
| 4 |
| ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು. |
| 5 |
| ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ. |
| 6 |
| ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/001.mp3
150
1