ಪರಿಶುದ್ದ ಬೈಬಲ್ 1997
|
| 1 |
| ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ! |
| 2 |
| ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ! |
| 3 |
| ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ. |
| 4 |
| ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ. |
| 5 |
| ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/100.mp3
150
100