|
| 1 |
|
| ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ! |
|
| 2 |
|
| ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. |
|
| 3 |
|
| ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು. |
|
| 4 |
|
| ಆತನು ನಮ್ಮಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು. |
|
| 5 |
|
| ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು. ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ. |
|
| 6 |
|
| ಯೆಹೋವನು ನೀತಿವಂತನಾಗಿದ್ದಾನೆ. ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು. |
|
| 7 |
|
| ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು; ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು. |
|
| 8 |
|
| ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ. |
|
| 9 |
|
| ಆತನು ಯಾವಾಗಲೂ ಟೀಕಿಸುವವನಲ್ಲ. ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ. |
|
| 10 |
|
| ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ. |
|
| 11 |
|
| ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ. |
|
| 12 |
|
| ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ. |
|
| 13 |
|
| ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು. |
|
| 14 |
|
| ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ. |
|
| 15 |
|
| ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ. |
|
| 16 |
|
| ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು. |
|
| 17 |
|
| ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು. |
|
| 18 |
|
| ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. |
|
| 19 |
|
| ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು. |
|
| 20 |
|
| ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ. |
|
| 21 |
|
| ಆತನ ಸೈನ್ಯಗಳೇ, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. |
|
| 22 |
|
| ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ. ಅವುಗಳೆಲ್ಲಾ ಆತನನ್ನು ಕೊಂಡಾಡಲಿ! ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! |
|
|
|
|