×

ಪರಿಶುದ್ದ ಬೈಬಲ್‌ 1997

ಕೀರ್ತನೆಗಳು ೧೧೩

1
ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ.
2
ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ.
3
ಪೂರ್ವದಿಂದಿಡಿದು ಪಶ್ಚಿಮದವರೆಗೂ ಯೆಹೋವನ ಹೆಸರು ಸ್ತುತಿಸಲ್ಪಡಲಿ.
4
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ.
5
ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ.
6
ಆತನು ಆಕಾಶವನ್ನೂ ಭೂಮಿಯನ್ನೂ ಬಾಗಿ ನೋಡುವನು.
7
ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು.
8
ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು.
9
ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ!
Kannada Bible 1997
Kannada Holy Bible: Easy-to-Read Version 1997 Bible League International
:
ಟಿಪ್ಪಣಿಗಳನ್ನು ಉಳಿಸಿ