ಪರಿಶುದ್ದ ಬೈಬಲ್ 1997
|
| 1 |
| ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು. |
| 2 |
| ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು? |
| 3 |
| ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ. |
| 4 |
| ಅನ್ಯಜನಾಂಗಗಳ “ದೇವರುಗಳು” ಬೆಳ್ಳಿಬಂಗಾರಗಳಿಂದ ಮಾಡಿದ ವಿಗ್ರಹಗಳಷ್ಟೇ. ಅವುಗಳನ್ನು ಮಾಡಿದವರು ಮನುಷ್ಯರೇ. |
| 5 |
| ಆ ವಿಗ್ರಹಗಳಿಗೆ ಬಾಯಿಗಳಿವೆ, ಆದರೆ ಮಾತಾಡಲಾರವು. ಕಣ್ಣುಗಳಿವೆ, ಆದರೆ ನೋಡಲಾರವು. |
| 6 |
| ಕಿವಿಗಳಿವೆ, ಆದರೆ ಕೇಳಲಾರವು. ಮೂಗುಗಳಿವೆ, ಆದರೆ ಮೂಸಲಾರವು. |
| 7 |
| ಕೈಗಳಿವೆ, ಆದರೆ ಯಾವುದನ್ನೂ ಮುಟ್ಟಲಾರವು. ಕಾಲುಗಳಿವೆ, ಆದರೆ ನಡೆಯಲಾರವು. ಅವುಗಳ ಗಂಟಲುಗಳಿಂದ ಶಬ್ದವೇ ಹೊರಡದು. |
| 8 |
| ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಟ್ಟಿರುವವರೂ ಅವುಗಳಂತೆಯೇ. |
| 9 |
| ಇಸ್ರೇಲರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ. |
| 10 |
| ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ. |
| 11 |
| ಯೆಹೋವನ ಭಕ್ತರು ಆತನಲ್ಲಿ ಭರವಸವಿಡುವರು. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ. |
| 12 |
| ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವದಿಸುವನು. ಆತನು ಇಸ್ರೇಲನ್ನೂ ಆರೋನನ ಮನೆತನವನ್ನೂ ಆಶೀರ್ವದಿಸುವನು. |
| 13 |
| ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು. |
| 14 |
| ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ. |
| 15 |
| ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ. |
| 16 |
| ಪರಲೋಕವು ಯೆಹೋವನದು. ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು. |
| 17 |
| ಸತ್ತುಹೋದವರು ಯೆಹೋವನನ್ನು ಕೊಂಡಾಡುವುದಿಲ್ಲ. ಸಮಾಧಿಯೊಳಗಿರುವವರು ಆತನನ್ನು ಸ್ತುತಿಸುವುದಿಲ್ಲ. |
| 18 |
| ನಾವಾದರೋ ಯೆಹೋವನನ್ನು ಈಗಲೂ ಯಾವಾಗಲೂ ಸ್ತುತಿಸುವೆವು! ಯೆಹೋವನಿಗೆ ಸ್ತೋತ್ರ! |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/115.mp3
150
115