ಪರಿಶುದ್ದ ಬೈಬಲ್ 1997
|
| 1 |
| ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ. |
| 2 |
| ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? |
| 3 |
| ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು. |
| 4 |
| ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು. |
| 5 |
| ಆ ಗರ್ವಿಷ್ಠರು ನಮ್ಮ ಪಾಲಿಗೆ ಬಾಯಿಯವರೆಗೂ ಮೇಲೇರಿ ಮುಳುಗಿಸುವ ನೀರಿನಂತಾಗುತ್ತಿದ್ದರು. |
| 6 |
| ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ. |
| 7 |
| ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು. |
| 8 |
| ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/124.mp3
150
124