ಪರಿಶುದ್ದ ಬೈಬಲ್ 1997
|
| 1 |
| ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ. |
| 2 |
| ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು. |
| 3 |
| ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು. |
| 4 |
| ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು. |
| 5 |
| ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ. |
| 6 |
| ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/128.mp3
150
128