|
| 1 |
|
| ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಪ್ರೀತಿ ಶಾಶ್ವತವಾದದ್ದು. |
|
| 2 |
|
| ದೇವಾಧಿದೇವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನ ಪ್ರೀತಿ ಶಾಶ್ವತವಾದದ್ದು. |
|
| 3 |
|
| ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು. |
|
| 4 |
|
| ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು. |
|
| 5 |
|
| ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬನನ್ನೇ ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು. |
|
| 6 |
|
| ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ. ಆತನ ಪ್ರೀತಿ ಶಾಶ್ವತವಾದದ್ದು. |
|
| 7 |
|
| ಆತನು ಮಹಾಬೆಳಕುಗಳನ್ನು ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 8 |
|
| ಹಗಲನ್ನು ಆಳುವುದಕ್ಕಾಗಿ ಆತನು ಸೂರ್ಯನನ್ನು ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 9 |
|
| ರಾತ್ರಿಯನ್ನು ಆಳುವುದಕ್ಕಾಗಿ ಆತನು ಚಂದ್ರನನ್ನೂ ನಕ್ಷತ್ರಗಳನ್ನೂ ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 10 |
|
| ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 11 |
|
| ಆತನು ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 12 |
|
| ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 13 |
|
| ಆತನು ಕೆಂಪು ಸಮುದ್ರವನ್ನು ಎರಡು ಭಾಗವನ್ನಾಗಿ ಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 14 |
|
| ಆತನು ಇಸ್ರೇಲರನ್ನು ಸಮುದ್ರದ ಮಧ್ಯದಲ್ಲಿ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 15 |
|
| ಆತನು ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಮುಳುಗಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 16 |
|
| ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 17 |
|
| ಆತನು ಶಕ್ತಿಯುತರಾದ ರಾಜರುಗಳನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 18 |
|
| ಆತನು ಬಲಿಷ್ಠರಾದ ರಾಜರುಗಳನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 19 |
|
| ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 20 |
|
| ಆತನು ಬಾಷಾನಿನ ರಾಜನಾದ ಓಗನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 21 |
|
| ಆತನು ಅವರ ದೇಶಗಳನ್ನು ಇಸ್ರೇಲರಿಗೆ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು. |
|
| 22 |
|
| ಆತನು ಆ ದೇಶಗಳನ್ನು ಇಸ್ರೇಲರಿಗೆ ಉಡುಗೊರೆಯಾಗಿ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು. |
|
| 23 |
|
| ನಾವು ಸೋತುಹೋಗಿದ್ದಾಗ ಆತನು ನಮ್ಮನ್ನು ಜ್ಞಾಪಿಸಿಕೊಂಡನು. ಆತನ ಪ್ರೀತಿ ಶಾಶ್ವತವಾದದ್ದು. |
|
| 24 |
|
| ಆತನು ನಮ್ಮನ್ನು ನಮ್ಮ ಶತ್ರುಗಳಿಂದ ರಕ್ಷಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
|
| 25 |
|
| ಆತನು ಪ್ರತಿಯೊಬ್ಬರಿಗೂ ಆಹಾರವನ್ನು ಕೊಡುವನು. ಆತನ ಪ್ರೀತಿ ಶಾಶ್ವತವಾದದ್ದು. |
|
| 26 |
|
| ಪರಲೋಕದ ದೇವರನ್ನು ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು. |
|
|
|
|