ಪರಿಶುದ್ದ ಬೈಬಲ್ 1997
|
| 1 |
| ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು. |
| 2 |
| ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು. |
| 3 |
| ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು. |
| 4 |
| ಆದರೆ ಪರದೇಶದಲ್ಲಿ ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ! |
| 5 |
| ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ. |
| 6 |
| ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ. |
| 7 |
| ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು. |
| 8 |
| ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು. |
| 9 |
| ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/137.mp3
150
137