|
| 1 |
|
| ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ. |
|
| 2 |
|
| ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು. |
|
| 3 |
|
| ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು. |
|
| 4 |
|
| ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ. |
|
| 5 |
|
| ನಮ್ಮ ಒಡೆಯನು ಬಹು ದೊಡ್ಡವನೂ ಪರಾಕ್ರಮಿಯೂ ಆಗಿದ್ದಾನೆ. ಆತನ ಜ್ಞಾನವು ಅಪರಿಮಿತವಾಗಿದೆ. |
|
| 6 |
|
| ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೋ ನಾಚಿಕೆಗೆ ಗುರಿಪಡಿಸುವನು. |
|
| 7 |
|
| ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ನಮ್ಮ ದೇವರನ್ನು ಹಾರ್ಪ್ವಾದ್ಯಗಳೊಂದಿಗೆ ಸ್ತುತಿಸಿರಿ. |
|
| 8 |
|
| ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು. |
|
| 9 |
|
| ದೇವರು ಪ್ರಾಣಿಗಳಿಗೂ ಪಕ್ಷಿಯ ಮರಿಗಳಿಗೂ ಆಹಾರ ಕೊಡುವನು. |
|
| 10 |
|
| ಯುದ್ಧದ ಕದುರೆಗಳಾಗಲಿ ಶಕ್ತಿಯುತರಾದ ಸೈನಿಕರಾಗಲಿ ಆತನನ್ನು ಮೆಚ್ಚಿಸಲಾರವು. |
|
| 11 |
|
| ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು. |
|
| 12 |
|
| ಜೆರುಸಲೇಮೇ, ಯೆಹೋವನನ್ನು ಸ್ತುತಿಸು! ಚೀಯೋನೇ, ನಿನ್ನ ದೇವರನ್ನು ಸ್ತುತಿಸು! |
|
| 13 |
|
| ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು. |
|
| 14 |
|
| ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು. |
|
| 15 |
|
| ಆತನು ಭೂಮಿಗೆ ಆಜ್ಞಾಪಿಸಲು ಅದು ಕೂಡಲೆ ವಿಧೇಯವಾಗುತ್ತದೆ. |
|
| 16 |
|
| ನೆಲವು ಉಣ್ಣೆಯಂತೆ ಬಿಳುಪಾಗುವವರೆಗೆ ಆತನು ಮಂಜನ್ನು ಬೀಳಿಸುವನು; ಹಿಮವನ್ನು ಗಾಳಿಯ ಮೂಲಕ ಧೂಳಿನಂತೆ ಹರಡುವನು. |
|
| 17 |
|
| ಆತನು ಆಕಾಶದಿಂದ ಕಲ್ಲುಗಳಂತಿರುವ ಆಲಿಕಲ್ಲನ್ನು ಸುರಿಸುವನು; ಯಾವನೂ ಚಳಿಯಲ್ಲಿ ಹೊರಗಡೆ ಇರಲಾರನು. |
|
| 18 |
|
| ಆತನು ಮತ್ತೊಂದು ಆಜ್ಞೆಯನ್ನು ಹೊರಡಿಸುವನು; ಆಗ ಬಿಸಿಗಾಳಿಯು ಮತ್ತೆ ಬೀಸುವುದು; ಮಂಜು ಕರಗಿಹೋಗುವುದು. ನೀರು ಹರಿಯತೊಡಗುವುದು. |
|
| 19 |
|
| ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು. |
|
| 20 |
|
| ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ! |
|
|
|
|