ಪರಿಶುದ್ದ ಬೈಬಲ್ 1997
|
| 1 |
| ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ! |
| 2 |
| ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ! |
| 3 |
| ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ. |
| 4 |
| ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. |
| 5 |
| ತಾಳಗಳಿಂದ ಆತನನ್ನು ಸ್ತುತಿಸಿರಿ! ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ! |
| 6 |
| ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ! |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/150.mp3
150
150