ಪರಿಶುದ್ದ ಬೈಬಲ್ 1997
|
| 1 |
| ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ? |
| 2 |
| ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು. |
| 3 |
| ದೇವರೇ, ಪರಿಶುದ್ಧನು ನೀನೇ. ನೀನು ರಾಜನಂತೆ ಕುಳಿತಿರುವೆ. ಇಸ್ರೇಲರ ಸ್ತುತಿಗಳೇ ನಿನ್ನ ಸಿಂಹಾಸನ. |
| 4 |
| ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು. ನೀನು ಅವರನ್ನು ರಕ್ಷಿಸಿದೆ. |
| 5 |
| ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ. |
| 6 |
| ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ. ಅವರು ನನ್ನನ್ನು ತಿರಸ್ಕರಿಸುತ್ತಾರೆ. |
| 7 |
| ನನ್ನನ್ನು ನೋಡಿದವರೆಲ್ಲರೂ ಗೇಲಿಮಾಡುವರು. ಅವರು ಓರೆ ತುಟಿಮಾಡಿ ತಲೆಯಾಡಿಸುತ್ತಾ, |
| 8 |
| “ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಅನ್ನುತ್ತಾರೆ. |
| 9 |
| ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ. |
| 10 |
| ಹುಟ್ಟಿದ ದಿನದಿಂದಲೂ ನೀನೇ ನನ್ನ ದೇವರಾಗಿರುವೆ. ತಾಯಿಯ ಗರ್ಭದಿಂದ ಬಂದಂದಿನಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. |
| 11 |
| ಹೀಗಿರಲು, ನನ್ನನ್ನು ತೊರೆಯಬೇಡ! ಆಪತ್ತು ಸಮೀಪಿಸಿದೆ. ನನಗೆ ಸಹಾಯಮಾಡಲು ಯಾರೂ ಇಲ್ಲ. |
| 12 |
| ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ. |
| 13 |
| ಪ್ರಾಣಿಯೊಂದನ್ನು ಸೀಳಿಹಾಕುತ್ತಾ ಗರ್ಜಿಸುವ ಸಿಂಹದಂತೆ ಅವರ ಬಾಯಿಗಳು ಅಗಲವಾಗಿ ತೆರೆದಿವೆ. |
| 14 |
| ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ಮೂಳೆಗಳು ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ. |
| 15 |
| ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ. |
| 16 |
| ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. |
| 17 |
| ನನ್ನ ಮೂಳೆಗಳು ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ! |
| 18 |
| ಅವರು ನನ್ನ ಮೇಲ್ಹೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟುಹಾಕುವರು. |
| 19 |
| ಯೆಹೋವನೇ, ನನ್ನನ್ನು ತೊರೆಯಬೇಡ! ನೀನೇ ನನ್ನ ಬಲ! ಬೇಗನೆ ನನಗೆ ಸಹಾಯಮಾಡು! |
| 20 |
| ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು. |
| 21 |
| ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು. |
| 22 |
| ನಿನ್ನ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು. |
| 23 |
| ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ. ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ. |
| 24 |
| ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ. |
| 25 |
| ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಯಜ್ಞಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. |
| 26 |
| ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯಗಳು ಯಾವಾಗಲೂ ಸಂತೋಷವಾಗಿರಲಿ! |
| 27 |
| ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ. |
| 28 |
| ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು. |
| 29 |
| ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು. |
| 30 |
| ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು. |
| 31 |
| ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು. |
|
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/022.mp3
150
22