|
| 1 |
|
| ನೀತಿವಂತರೆ, ಯೆಹೋವನಲ್ಲಿ ಉಲ್ಲಾಸಪಡಿರಿ. ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ. |
|
| 2 |
|
| ಲೈರ್ವಾದ್ಯವನ್ನು ನುಡಿಸುತ್ತಾ ಯೆಹೋವನನ್ನು ಸ್ತುತಿಸಿರಿ! ಹತ್ತುತಂತಿಗಳ ಹಾರ್ಪ್ವಾದ್ಯವನ್ನು ಬಾರಿಸುತ್ತಾ ಆತನನ್ನು ಕೊಂಡಾಡಿರಿ. |
|
| 3 |
|
| ಆತನಿಗೆ ಹೊಸ ಹಾಡನ್ನು ಹಾಡಿರಿ! ಹಾರ್ಪ್ವಾದ್ಯಗಳನ್ನು ಇಂಪಾಗಿ ನುಡಿಸುತ್ತಾ ಆನಂದದಿಂದ ಆರ್ಭಟಿಸಿರಿ. |
|
| 4 |
|
| ಯೆಹೋವನ ವಾಕ್ಯವು ಸತ್ಯವಾದದ್ದು! ಆತನ ಕಾರ್ಯಗಳೆಲ್ಲಾ ಭರವಸೆಗೆ ಯೋಗ್ಯವಾಗಿವೆ. |
|
| 5 |
|
| ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು. ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ. |
|
| 6 |
|
| ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು. |
|
| 7 |
|
| ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು. |
|
| 8 |
|
| ಭೂಲೋಕದವರೆಲ್ಲರೂ ಯೆಹೋವನಲ್ಲಿ ಭಯಭಕ್ತಿಯಿಂದಿರಲಿ. ಭೂನಿವಾಸಿಗಳೆಲ್ಲರೂ ಆತನಿಗೆ ಭಯಪಡಲಿ. |
|
| 9 |
|
| ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು. |
|
| 10 |
|
| ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು. |
|
| 11 |
|
| ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ. ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ. |
|
| 12 |
|
| ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ. |
|
| 13 |
|
| ಯೆಹೋವನು ಪರಲೋಕದಿಂದ ಮನುಷ್ಯರನ್ನು ದೃಷ್ಟಿಸಿ ನೋಡುವನು. |
|
| 14 |
|
| ಆತನು ತನ್ನ ಮಹಾಸಿಂಹಾಸನದಿಂದ ಭೂನಿವಾಸಿಗಳೆಲ್ಲರನ್ನು ನೋಡುವನು. |
|
| 15 |
|
| ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ. ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ. |
|
| 16 |
|
| ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು. |
|
| 17 |
|
| ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ. ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು. |
|
| 18 |
|
| ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು. |
|
| 19 |
|
| ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ. ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು. |
|
| 20 |
|
| ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ. ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ. |
|
| 21 |
|
| ದೇವರು ನನ್ನನ್ನು ಸಂತೋಷಗೊಳಿಸುವನು. ನಾನು ಆತನ ಪರಿಶುದ್ಧ ಹೆಸರಿನಲ್ಲಿಯೇ ಭರವಸವಿಟ್ಟಿದ್ದೇನೆ. |
|
| 22 |
|
| ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ನಿನ್ನ ಶಾಶ್ವತವಾದ ಪ್ರೀತಿಯು ನಮ್ಮ ಮೇಲಿರಲಿ. |
|
|
|
|