|
| 1 |
|
| ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ. |
|
| 2 |
|
| ನಿನ್ನಿಂದ ನನಗೆ ನೋವಾಗಿದೆ. ನಿನ್ನ ಬಾಣಗಳು ನನಗೆ ನಾಟಿಕೊಂಡಿವೆ. |
|
| 3 |
|
| ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ. ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ. |
|
| 4 |
|
| ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ. |
|
| 5 |
|
| ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು. ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ. |
|
| 6 |
|
| ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ. |
|
| 7 |
|
| ನನಗೆ ಜ್ವರವಿದೆ, ನನ್ನ ಇಡೀ ದೇಹ ನೋಯುತ್ತಿದೆ. |
|
| 8 |
|
| ನನಗೆ ಬಹಳ ನೋವಿರುವುದರಿಂದ ಜೋಮು ಹಿಡಿದಂತಿದೆ. ಹೃದಯದ ವೇದನೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. |
|
| 9 |
|
| ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ. ನನ್ನ ನಿಟ್ಟುಸಿರುಗಳು ನಿನಗೆ ಮರೆಯಾಗಿಲ್ಲ. |
|
| 10 |
|
| ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ. |
|
| 11 |
|
| ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ. |
|
| 12 |
|
| ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ. |
|
| 13 |
|
| ಆದರೆ ನಾನು ಕಿವುಡನಂತೆ ಕೇಳದವನಾಗಿದ್ದೇನೆ. ಮೂಕನಂತೆ ಮಾತಾಡದವನಾಗಿದ್ದೇನೆ. |
|
| 14 |
|
| ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. |
|
| 15 |
|
| ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ನನ್ನ ಒಡೆಯನಾದ ದೇವರೇ, ನನಗೆ ಉತ್ತರ ನೀಡು. |
|
| 16 |
|
| ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು. ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು. |
|
| 17 |
|
| ನಾನು ಅಪರಾಧಿಯೆಂದು ನನಗೆ ಗೊತ್ತಿದೆ; ನನ್ನ ನೋವನ್ನು ಮರೆಯಲಾರೆ. |
|
| 18 |
|
| ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ. |
|
| 19 |
|
| ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ. ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು. |
|
| 20 |
|
| ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ. |
|
| 21 |
|
| ಯೆಹೋವನೇ, ನನ್ನನ್ನು ಕೈಬಿಡಬೇಡ! ನನ್ನ ದೇವರೇ, ನನ್ನ ಸಮೀಪದಲ್ಲೇ ಇರು! |
|
| 22 |
|
| ಯೆಹೋವನೇ, ನನ್ನ ರಕ್ಷಕನೇ, ಬೇಗನೆ ಬಂದು ನನಗೆ ಸಹಾಯಮಾಡು! |
|
|
|
|