ಪರಿಶುದ್ದ ಬೈಬಲ್ 1997
|
| 1 |
| ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. |
| 2 |
| ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ. |
| 3 |
| ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು! |
| 4 |
| ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ. |
| 5 |
| ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದುಹೋಗುತ್ತದೆ” ಎಂದು ಹೇಳುತ್ತಿದ್ದಾರೆ. |
| 6 |
| ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು; ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು. |
| 7 |
| ನನ್ನ ವೈರಿಗಳು ನನಗೆ ವಿರೋಧವಾಗಿ ಗುಟ್ಟಾಗಿ ಮಾತಾಡಿಕೊಳ್ಳುವರು; ನನಗೆ ಕೇಡುಮಾಡಲು ಆಲೋಚಿಸುವರು. |
| 8 |
| “ಅವನು ಯಾವುದೋ ತಪ್ಪು ಮಾಡಿರುವುದರಿಂದ ಅವನಿಗೆ ಕಾಯಿಲೆ ಬಂದಿದೆ, ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ. |
| 9 |
| ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ. |
| 10 |
| ಯೆಹೋವನೇ, ದಯವಿಟ್ಟು ನನಗೆ ದಯೆತೋರು; ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು. |
| 11 |
| ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು. |
| 12 |
| ನಿರಪರಾಧಿಯಾದ ನನಗೆ ಸಹಾಯಮಾಡು. ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು. |
| 13 |
| ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್! |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/041.mp3
150
41