ಪರಿಶುದ್ದ ಬೈಬಲ್ 1997
|
| 1 |
| ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ! |
| 2 |
| ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ. |
| 3 |
| ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ. |
| 4 |
| ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು. |
| 5 |
| ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು. |
| 6 |
| ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. |
| 7 |
| ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. |
| 8 |
| ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು. |
| 9 |
| ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ! |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/047.mp3
150
47