ಪರಿಶುದ್ದ ಬೈಬಲ್ 1997
|
| 1 |
| ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ನನ್ನ ಆಲೋಚನೆಗಳಿಗೆ ಗಮನಕೊಡು. |
| 2 |
| ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು. ನನ್ನ ಪ್ರಾರ್ಥನೆಯನ್ನು ಆಲೈಸು. |
| 3 |
| ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ. |
| 4 |
| ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ. ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು. |
| 5 |
| ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು; ದುಷ್ಟರನ್ನು ನೀನು ದ್ವೇಷಿಸುವೆ. |
| 6 |
| ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು. |
| 7 |
| ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು. |
| 8 |
| ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ, ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. |
| 9 |
| ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ. |
| 10 |
| ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು. |
| 11 |
| ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು. |
| 12 |
| ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ; ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/005.mp3
150
5