ಪರಿಶುದ್ದ ಬೈಬಲ್ 1997
|
| 1 |
| ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ. |
| 2 |
| ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು. |
| 3 |
| ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ. |
| 4 |
| ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. |
| 5 |
| ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು. |
| 6 |
| ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು: |
| 7 |
| “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.” |
| 8 |
| ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ. |
| 9 |
| ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/052.mp3
150
52