ಪರಿಶುದ್ದ ಬೈಬಲ್ 1997
|
| 1 |
| ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. |
| 2 |
| ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ. |
| 3 |
| ನನ್ನ ಇಡೀ ದೇಹ ನಡುಗುತ್ತಿದೆ. ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು? |
| 4 |
| ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು. |
| 5 |
| ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು! |
| 6 |
| ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ. |
| 7 |
| ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ. |
| 8 |
| ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. |
| 9 |
| ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು. |
| 10 |
| ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/006.mp3
150
6