ಪರಿಶುದ್ದ ಬೈಬಲ್ 1997
|
| 1 |
| ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು. |
| 2 |
| ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು. |
| 3 |
| ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ. |
| 4 |
| ನಿನ್ನ ಆರಾಧಕರನ್ನು ನೀನು ಎಚ್ಚರಿಸುವೆ. ಈಗ ಅವರು ಶತ್ರುಗಳಿಂದ ಪಾರಾಗಬಹುದು. |
| 5 |
| ನಿನ್ನ ಮಹಾಶಕ್ತಿಯಿಂದ ನಮ್ಮನ್ನು ರಕ್ಷಿಸು! ನನ್ನ ಪ್ರಾರ್ಥನೆಗೆ ಉತ್ತರನೀಡಿ ನಿನ್ನ ಪ್ರಿಯರನ್ನು ರಕ್ಷಿಸು! |
| 6 |
| ದೇವರು ತನ್ನ ಆಲಯದೊಳಗೆ ಹೀಗೆಂದನು: “ನಾನು ಅವರಿಗೆ ಶೆಕೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು. |
| 7 |
| ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ. |
| 8 |
| ಮೋವಾಬ್ ನನ್ನ ಸ್ನಾನಪಾತ್ರೆ. ಎದೋಮ್ ನನ್ನ ಪಾದರಕ್ಷೆಗಳ ಸ್ಥಳ. ನಾನು ಫಿಲಿಷ್ಟಿಯರನ್ನು ಸೋಲಿಸಿ ಜಯಘೋಷ ಮಾಡುವೆ.” |
| 9 |
| ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು? (Verses 9-10) |
| 10 |
| See verse 9 |
| 11 |
| ದೇವರೇ, ವೈರಿಗಳನ್ನು ಸೋಲಿಸಲು ನಮಗೆ ಸಹಾಯಮಾಡು! ಜನರು ನಮಗೆ ಸಹಾಯಮಾಡಲಾರರು! |
| 12 |
| ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು! |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/060.mp3
150
60