ಪರಿಶುದ್ದ ಬೈಬಲ್ 1997
|
| 1 |
| ಸರ್ವಭೂನಿವಾಸಿಗಳೇ, ದೇವರಿಗೆ ಜಯಘೋಷ ಮಾಡಿರಿ! |
| 2 |
| ಆತನ ಹೆಸರಿನ ಮಹಿಮೆಯನ್ನು ಕೀರ್ತಿಸಿರಿ. ಸ್ತುತಿಗೀತೆಗಳಿಂದ ಆತನನ್ನು ಸನ್ಮಾನಿಸಿರಿ. |
| 3 |
| ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು. |
| 4 |
| ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ. |
| 5 |
| ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಕಾರ್ಯಗಳು ಅತ್ಯದ್ಭುತವಾಗಿವೆ! |
| 6 |
| ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ. |
| 7 |
| ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು. |
| 8 |
| ಜನಾಂಗಗಳೇ, ನಮ್ಮ ದೇವರನ್ನು ಕೊಂಡಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. |
| 9 |
| ನಮಗೆ ಜೀವಕೊಟ್ಟವನು ಆತನೇ. ನಮ್ಮನ್ನು ಕಾಪಾಡುವವನೂ ಆತನೇ. |
| 10 |
| ಜನರು ಬೆಳ್ಳಿಯನ್ನು ಬೆಂಕಿಯಿಂದ ಶೋಧಿಸುವಂತೆ ದೇವರು ನಮ್ಮನ್ನು ಪರೀಕ್ಷಿಸಿದನು. |
| 11 |
| ದೇವರೇ, ನೀನು ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದೆ. ನೀನು ನಮಗೆ ಭಾರವಾದ ಹೊರೆಗಳನ್ನು ಹೊರಿಸಿದೆ; |
| 12 |
| ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ. |
| 13 |
| ಆದ್ದರಿಂದ ನಿನ್ನ ಆಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. |
| 14 |
| ನಾನು ಇಕ್ಕಟ್ಟಿನಲ್ಲಿದ್ದಾಗ ಸಹಾಯಕ್ಕಾಗಿ ನಿನ್ನನ್ನು ಕೂಗಿಕೊಂಡಾಗ ಮಾಡಿದ ಹರಕೆಗಳನ್ನು ಸಲ್ಲಿಸುವೆನು. |
| 15 |
| ಪಾಪಪರಿಹಾರಕ ಯಜ್ಞಗಳನ್ನು ನಿನಗೆ ಅರ್ಪಿಸುವೆನು; ಟಗರುಗಳನ್ನೂ ಧೂಪವನ್ನೂ ಅರ್ಪಿಸುವೆನು; ಹೋರಿಗಳನ್ನೂ ಹೋತಗಳನ್ನೂ ಅರ್ಪಿಸುವೆನು. |
| 16 |
| ದೇವಭಕ್ತರೆಲ್ಲರೂ ಬನ್ನಿರಿ, ದೇವರು ನನಗೋಸ್ಕರ ಮಾಡಿರುವುದನ್ನು ನಿಮಗೆ ತಿಳಿಸುವೆನು. |
| 17 |
| ನಾನು ಆತನಿಗೆ ಪ್ರಾರ್ಥಿಸಿದೆನು; ಆತನನ್ನು ಸ್ತುತಿಸಿದೆನು. |
| 18 |
| ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು. |
| 19 |
| ದೇವರು ನನ್ನ ಮೊರೆಯನ್ನು ಕೇಳಿದನು; ನನ್ನ ಪ್ರಾರ್ಥನೆಯನ್ನು ಆಲಿಸಿದನು. |
| 20 |
| ದೇವರಿಗೆ ಸ್ತೋತ್ರವಾಗಲಿ! ಆತನು ನನಗೆ ವಿಮುಖನಾಗದೆ, ನನ್ನ ಪ್ರಾರ್ಥನೆಯನ್ನು ಆಲಿಸಿ, ತನ್ನ ಪ್ರೀತಿ ತೋರಿದನು! |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/066.mp3
150
66