ಪರಿಶುದ್ದ ಬೈಬಲ್ 1997
|
| 1 |
| ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು! |
| 2 |
| ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು. |
| 3 |
| ನನ್ನ ದೇವರಾದ ಯೆಹೋವನೇ, ನಾನು ಯಾವುದೇ ಅಪರಾಧವನ್ನು ಮಾಡಿದ್ದರೆ, |
| 4 |
| ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ, |
| 5 |
| ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ. |
| 6 |
| ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು! |
| 7 |
| ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತಸ್ಥಾನದಲ್ಲಿ ಆಸೀನನಾಗು. |
| 8 |
| ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು. |
| 9 |
| ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ. |
| 10 |
| ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು. |
| 11 |
| ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು. |
| 12 |
| ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ. |
| 13 |
| ದುಷ್ಟರನ್ನು ಶಿಕ್ಷಿಸಲು ಆತನು ಸಿದ್ಧನಾಗಿದ್ದಾನೆ. |
| 14 |
| ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು. |
| 15 |
| ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು. |
| 16 |
| ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು. |
| 17 |
| ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/007.mp3
150
7