ಪರಿಶುದ್ದ ಬೈಬಲ್ 1997
|
| 1 |
| ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು! |
| 2 |
| ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ. |
| 3 |
| ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ. |
| 4 |
| ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ. |
| 5 |
| ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ! |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/070.mp3
150
70