|
| 1 |
|
| ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು. |
|
| 2 |
|
| ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು. |
|
| 3 |
|
| ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ, ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ. |
|
| 4 |
|
| ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ. |
|
| 5 |
|
| ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ. |
|
| 6 |
|
| ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು. |
|
| 7 |
|
| ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ. |
|
| 8 |
|
| ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ. |
|
| 9 |
|
| ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ. |
|
| 10 |
|
| ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ. |
|
| 11 |
|
| ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ. |
|
| 12 |
|
| ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು. |
|
| 13 |
|
| ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು. |
|
| 14 |
|
| ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ. |
|
| 15 |
|
| ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ. |
|
| 16 |
|
| ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ. |
|
| 17 |
|
| ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಆವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ. |
|
| 18 |
|
| ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು! |
|
| 19 |
|
| ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್! |
|
| 20 |
|
| ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು. |
|
|
|
|