ಪರಿಶುದ್ದ ಬೈಬಲ್ 1997
|
| 1 |
| ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ. |
| 2 |
| ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು. |
| 3 |
| ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು. |
| 4 |
| ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ. |
| 5 |
| ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು. |
| 6 |
| ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ. |
| 7 |
| ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/087.mp3
150
87