ಪರಿಶುದ್ದ ಬೈಬಲ್ 1997
|
| 1 |
| ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ. |
| 2 |
| ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ! |
| 3 |
| ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ. |
| 4 |
| ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ. |
| 5 |
| ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/093.mp3
150
93