ಪರಿಶುದ್ದ ಬೈಬಲ್ 1997
|
| 1 |
| ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ! ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ. |
| 2 |
| ಆತನಿಗೆ ಕೃತಜ್ಞತಾಸುತ್ತಿ ಮಾಡೋಣ. ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ. |
| 3 |
| ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ! ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ. |
| 4 |
| ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ. |
| 5 |
| ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ. ಭೂಮಿಯೂ ಆತನ ಕೈಕೆಲಸವೇ. |
| 6 |
| ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ. |
| 7 |
| ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ. |
| 8 |
| ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ. |
| 9 |
| ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು. ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು. |
| 10 |
| ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ. |
| 11 |
| ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.” |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/095.mp3
150
95