ಪರಿಶುದ್ದ ಬೈಬಲ್ 1997
|
| 1 |
| ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ. |
| 2 |
| ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ. |
| 3 |
| ಬೆಂಕಿಯು ಆತನ ಮುಂದೆ ಹೋಗಿ ಆತನ ಶತ್ರುಗಳನ್ನು ನಾಶಮಾಡುವುದು. |
| 4 |
| ಆತನ ಮಿಂಚು ಆಕಾಶದಲ್ಲಿ ಹೊಳೆಯುತ್ತದೆ. ಜನರು ಅದನ್ನು ನೋಡಿ ಭಯಗೊಂಡಿದ್ದಾರೆ. |
| 5 |
| ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ. |
| 6 |
| ಆಕಾಶಗಳೇ, ಆತನ ನೀತಿಯ ಕುರಿತು ಹೇಳಿರಿ! ದೇವರ ಮಹಿಮೆಯನ್ನು ಪ್ರತಿಯೊಬ್ಬನೂ ಕಾಣಲಿ! |
| 7 |
| ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ. |
| 8 |
| ಚೀಯೋನೇ, ಕೇಳಿ ಸಂತೋಷಪಡು! ಯೆಹೂದದ ಪಟ್ಟಣಗಳೇ, ಆನಂದಿಸಿರಿ. ಯಾಕೆಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ. |
| 9 |
| ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು. |
| 10 |
| ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು. |
| 11 |
| ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ. |
| 12 |
| ನೀತಿವಂತರೇ, ಯೆಹೋವನಲ್ಲಿ ಸಂತೋಷಪಡಿರಿ! ಆತನ ಪವಿತ್ರ ಹೆಸರನ್ನು ಸನ್ಮಾನಿಸಿರಿ! |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/psalms/097.mp3
150
97