ಕನ್ನಡ ಸಮಕಾಲಿಕ ಅನುವಾದ
|
| 1 |
| ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, |
| 2 |
| “ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು. |
| 3 |
| ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು. |
| 4 |
| ಮೇಜನ್ನು ಒಳಗೆ ತಂದು, ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪಸ್ತಂಭವನ್ನು ಒಳಗೆ ತಂದು, ನೀನು ಅದರ ದೀಪಗಳನ್ನು ಅಂಟಿಸಬೇಕು. |
| 5 |
| ನೀನು ಮಾಡಿದ ಚಿನ್ನದ ಧೂಪಪೀಠವನ್ನು ಒಡಂಬಡಿಕೆಯ ಮಂಜೂಷದ ಎದುರಾಗಿ ಇಟ್ಟು, ದೇವದರ್ಶನದ ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಬೇಕು. |
| 6 |
| “ನೀನು ದಹನಬಲಿಯ ಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡಬೇಕು. |
| 7 |
| ನೀನು ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಗಂಗಾಳವನ್ನಿಟ್ಟು, ಅದರಲ್ಲಿ ನೀರನ್ನು ತುಂಬಿಸಬೇಕು. |
| 8 |
| ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ಪರದೆಯನ್ನು ತೂಗು ಹಾಕಬೇಕು. |
| 9 |
| “ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು. |
| 10 |
| ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು. |
| 11 |
| ಗಂಗಾಳವನ್ನೂ, ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ, ಅದನ್ನು ಪ್ರತಿಷ್ಠಾಪನೆ ಮಾಡಬೇಕು. |
| 12 |
| “ಆರೋನನನ್ನೂ, ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ, ಅವರನ್ನು ನೀರಿನಿಂದ ಸ್ನಾನ ಮಾಡಿಸಬೇಕು. |
| 13 |
| ಆರೋನನು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ, ಅವನನ್ನು ಶುದ್ಧಮಾಡಬೇಕು. |
| 14 |
| ಅವನ ಪುತ್ರರನ್ನು ನೀನು ಬರಮಾಡಿಕೊಂಡು, ಅವರಿಗೆ ಅಂಗಿಗಳನ್ನು ತೊಡಿಸಿ, |
| 15 |
| ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು. |
| 16 |
| ಮೋಶೆಯು ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು. |
| 17 |
| ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಗುಡಾರವು ಎದ್ದುನಿಂತಿತು. |
| 18 |
| ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ, ಅದರ ಕಾಲುಗಳನ್ನು ಬಿಗಿದು, ಅದರ ಚೌಕಟ್ಟುಗಳನ್ನು ಇರಿಸಿ, ಅಗುಳಿಗಳನ್ನು ಹಾಕಿ, ಅದರ ಸ್ತಂಭಗಳನ್ನು ನಿಲ್ಲಿಸಿದನು. |
| 19 |
| ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ, ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು. |
| 20 |
| ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು. |
| 21 |
| ಅವನು ಮಂಜೂಷವನ್ನು ಗುಡಾರಕ್ಕೆ ತಂದು, ಮರೆಮಾಡುವ ಪರದೆಯನ್ನಿರಿಸಿ, ಒಡಂಬಡಿಕೆಯ ಮಂಜೂಷವನ್ನು ಮರೆಮಾಡಿದನು. ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಮೋಶೆಯು ಮಾಡಿದನು. |
| 22 |
| ಅನಂತರ ಮೋಶೆ ದೇವದರ್ಶನದ ಗುಡಾರದ ಉತ್ತರ ಭಾಗದಲ್ಲಿ, ಪರದೆಯ ಹೊರಗೆ ಮೇಜನ್ನು ಇಟ್ಟನು. |
| 23 |
| ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು. |
| 24 |
| ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು. |
| 25 |
| ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಯೆಹೋವ ದೇವರ ಸನ್ನಿಧಿಯಲ್ಲಿ ದೀಪಗಳನ್ನು ಇರಿಸಿದನು. |
| 26 |
| ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ಪರದೆಯ ಮುಂದೆ ಇಟ್ಟನು. |
| 27 |
| ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು. |
| 28 |
| ಗುಡಾರದ ಬಾಗಿಲಿನ ಪರದೆಯನ್ನು ತೂಗುಹಾಕಿದನು. |
| 29 |
| ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು. |
| 30 |
| ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯ ಗಂಗಾಳವನ್ನು ಇಟ್ಟು, ಅದರಲ್ಲಿ ತೊಳೆಯುವುದಕ್ಕೆ ನೀರನ್ನು ತುಂಬಿಸಿದನು. |
| 31 |
| ಮೋಶೆಯೂ, ಆರೋನನೂ, ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆದುಕೊಂಡರು. |
| 32 |
| ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು. |
| 33 |
| ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು. |
| 34 |
| ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು. |
| 35 |
| ದೇವದರ್ಶನದ ಗುಡಾರದ ಮೇಲೆ ಮೇಘವು ನೆಲೆಯಾಗಿದ್ದದರಿಂದಲೂ, ಯೆಹೋವ ದೇವರು ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿದ್ದರಿಂದಲೂ, ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. |
| 36 |
| ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ, ಇಸ್ರಾಯೇಲರು ತಮ್ಮ ಪ್ರಯಾಣಕ್ಕಾಗಿ ಮುಂದೆ ಹೊರಡುತ್ತಿದ್ದರು. |
| 37 |
| ಆದರೆ ಮೇಘವು ಮೇಲಕ್ಕೆ ಎತ್ತದೇ ಇರುವಾಗ ಅದು ಎತ್ತುವ ದಿವಸದವರೆಗೆ ಅವರು ಪ್ರಯಾಣ ಮಾಡಲಿಲ್ಲ. |
| 38 |
| ಏಕೆಂದರೆ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿ ಅವರ ಕಣ್ಣುಗಳ ಮುಂದೆ ಹಗಲಿನಲ್ಲಿ ಯೆಹೋವ ದೇವರ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. |
|
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada2022/exodus/040.mp3
40
40