|
| 1 |
|
| ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ. |
|
| 2 |
|
| ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ. |
|
| 3 |
|
| ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು. |
|
| 4 |
|
| ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ. |
|
| 5 |
|
| ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು. |
|
| 6 |
|
| ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು. |
|
| 7 |
|
| ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ. |
|
| 8 |
|
| ಕೇಡನ್ನು ಬಿತ್ತುವವನು ಕೇಡನ್ನು ಕೊಯ್ಯುವನು. ಅವನ ದುಷ್ಟಶಕ್ತಿಯು ನಾಶವಾಗುವುದು. |
|
| 9 |
|
| ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು. |
|
| 10 |
|
| ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ. |
|
| 11 |
|
| ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು. |
|
| 12 |
|
| ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ವಂಚಕರ ಮಾತುಗಳನ್ನಾದರೋ ನಾಶಪಡಿಸುವನು. |
|
| 13 |
|
| “ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ. |
|
| 14 |
|
| 4ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು. |
|
| 15 |
|
| ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು. |
|
| 16 |
|
| ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ. |
|
| 17 |
|
| ನನ್ನ ಉಪದೇಶಗಳಿಗೆ ಕಿವಿಗೊಡು. ಜ್ಞಾನಿಗಳ ಉಪದೇಶವನ್ನೇ ನಾನು ನಿನಗೆ ಉಪದೇಶಿಸುವೆನು. ಈ ಉಪದೇಶಗಳಿಂದ ಕಲಿತುಕೊ. |
|
| 18 |
|
| ನೀನು ಈ ಉಪದೇಶಗಳನ್ನು ಜ್ಞಾಪಕದಲ್ಲಿಟ್ಟುಕೊಂಡರೆ ನಿನಗೆ ಒಳ್ಳೆಯದಾಗುವುದು. ನೀನು ಈ ಉಪದೇಶಗಳನ್ನು ಹೇಳಬಲ್ಲವನಾದರೆ ನಿನಗೆ ಅನುಕೂಲವಾಗುವುದು. |
|
| 19 |
|
| ಆ ಜ್ಞಾನೋಕ್ತಿಗಳನ್ನು ನಾನೀಗ ಉಪದೇಶಿಸುವೆನು, ನೀನು ಯೆಹೋವನಲ್ಲಿ ಭರವಸೆ ಇಡಬೇಕೆಂಬುದೇ ನನ್ನ ಅಪೇಕ್ಷೆ. |
|
| 20 |
|
| ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ. |
|
| 21 |
|
| ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ. |
|
| 22 |
|
| ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ. |
|
| 23 |
|
| ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು. |
|
| 24 |
|
| ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ. |
|
| 25 |
|
| ಇಲ್ಲವಾದರೆ, ನೀನೂ ಅವನಂತಾಗುವೆ. ಆಗ ಅವನಿಗಿರುವ ತೊಂದರೆಗಳು ನಿನಗೂ ಬರುತ್ತವೆ. |
|
| 26 |
|
| ಬೇರೊಬ್ಬನ ಸಾಲಗಳಿಗೆ ಜಾಮೀನಾಗಬೇಡ. |
|
| 27 |
|
| ನೀನು ಅವನ ಸಾಲವನ್ನು ತೀರಿಸಲಾಗದಿದ್ದರೆ, ನಿನ್ನಲ್ಲಿರುವ ಪ್ರತಿಯೊಂದನ್ನು ಕಳೆದುಕೊಳ್ಳುವೆ. ನಿನ್ನ ಹಾಸಿಗೆಯನ್ನು ನೀನೇಕೆ ಕಳೆದುಕೊಳ್ಳಬೇಕು. |
|
| 28 |
|
| ಬಹುಕಾಲದ ಹಿಂದೆ ನಿನ್ನ ಪೂರ್ವಿಕರು ಜಮೀನಿಗೆ ಹಾಕಿದ ಮೇರೆಗಲ್ಲನ್ನು ಎಂದಿಗೂ ಜರುಗಿಸಬೇಡ. |
|
| 29 |
|
| ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ. |
|
|
: |
| ೧ | | ೨ | | ೩ | | ೪ | | ೫ | | ೬ | | ೭ | | ೮ | | ೯ | | ೧೦ | | ೧೧ | | ೧೨ | | ೧೩ | | ೧೪ | | ೧೫ | | ೧೬ | | ೧೭ | | ೧೮ | | ೧೯ | | ೨೦ | | ೨೧ | | ೨೨ | | ೨೩ | | ೨೪ | | ೨೫ | | ೨೬ | | ೨೭ | | ೨೮ | | ೨೯ | 1
1
1 |
|
|---|
|
https://beblia.bible:81/BibleAudio/kannada/proverbs/022.mp3
31
22