ಪರಿಶುದ್ದ ಬೈಬಲ್ 1997
|
| 1 |
| ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಘಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಘಂದಿತು. |
| 2 |
| ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು. |
| 3 |
| ಅವರು ವೇಗವಾಗಿ ಓಡುವ ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು. |
| 4 |
| ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಘಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನೆಐಲ್ಲ ನಾಶಮಾಡುವ ಕಾಲ ಘಂದಿದೆ. ಯೆಹೋವನು ಘಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು. |
| 5 |
| ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನ್ನು ಸ್ತಘ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ? |
| 6 |
| “ಅಯ್ಯೋ, ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನ್ನ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು! |
| 7 |
| ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಙೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಊಸಿದ್ದಾನೆ.” |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/jeremiah/047.mp3
52
47