|
| 1 |
|
| ಯೆಹೋವನ ರೌದ್ರ ದಂಡದಿಂದ ಸಂಕಟವನ್ನು ಅನುಭವಿಸಿರುವವನು ನಾನೇ! |
|
| 2 |
|
| ಯೆಹೋವನು ನನ್ನನ್ನು ಬೆಳಕೇ ಇಲ್ಲದ ಕತ್ತಲೆಗೆ ನಡೆಸಿಕೊಂಡು ಬಂದನು. |
|
| 3 |
|
| ಯೆಹೋವನು ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದನು. ಆತನು ಇಡೀ ದಿನವೆಲ್ಲಾ ಮತ್ತೆಮತ್ತೆ ಹಾಗೆಯೇ ಮಾಡಿದನು. |
|
| 4 |
|
| ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು. |
|
| 5 |
|
| ಆತನು ನನ್ನನ್ನು ಕಠೋರತೆಯಿಂದಲೂ ಆಪತ್ತಿನಿಂದಲೂ ಸುತ್ತುವರಿದು ಮುತ್ತಿಗೆಹಾಕಿದ್ದಾನೆ. |
|
| 6 |
|
| ಬಹುಕಾಲದ ಹಿಂದೆಯೇ ಸತ್ತಿರುವವರಂತೆ ನನ್ನನ್ನು ಕತ್ತಲೆಯಲ್ಲಿ ಕುಳ್ಳಿರಿಸಿದ್ದಾನೆ. |
|
| 7 |
|
| ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು. |
|
| 8 |
|
| ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ. |
|
| 9 |
|
| ಆತನು ನನ್ನ ದಾರಿಯನ್ನು ಕಲ್ಲುಗಳಿಂದ ಮುಚ್ಚಿದ್ದಾನೆ. ಆತನು ನನ್ನ ಹಾದಿಯನ್ನು ಡೊಂಕುಗೊಳಿಸಿದ್ದಾನೆ. |
|
| 10 |
|
| ನನ್ನ ಪಾಲಿಗಂತೂ ಯೆಹೋವನು ಆಕ್ರಮಣಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ. |
|
| 11 |
|
| ಯೆಹೋವನು ನನ್ನನ್ನು ನನ್ನ ದಾರಿಯಿಂದ ಓಡಿಸಿದನು. ಆತನು ನನ್ನನ್ನು ಚೂರುಚೂರು ಮಾಡಿದನು. ಆತನು ನನ್ನನ್ನು ಅಸಹಾಯಕನನ್ನಾಗಿ ತೊರೆದುಬಿಟ್ಟಿದ್ದಾನೆ. |
|
| 12 |
|
| ಆತನು ತನ್ನ ಬಿಲ್ಲನ್ನು ಸಜ್ಜುಗೊಳಿಸಿದನು. ಆತನು ತನ್ನ ಬಾಣಗಳಿಂದ ನನಗೆ ಗುರಿಯಿಟ್ಟನು. |
|
| 13 |
|
| ಆತನು ನನ್ನ ಹೊಟ್ಟೆಗೆ ತನ್ನ ಬಾಣಗಳಿಂದ ಹೊಡೆದನು. |
|
| 14 |
|
| ನನ್ನ ಜನರಿಗೆಲ್ಲಾ ಹಾಸ್ಯಾಸ್ಪದವಾಗಿದ್ದೇನೆ. ದಿನವೆಲ್ಲಾ ಅವರು ನನ್ನ ಬಗ್ಗೆ ಹಾಡುಗಳನ್ನು ಹಾಡುತ್ತಾ ಗೇಲಿ ಮಾಡುತ್ತಾರೆ. |
|
| 15 |
|
| ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು. |
|
| 16 |
|
| ಯೆಹೋವನು ನನಗೆ ನುರುಜುಗಲ್ಲನ್ನು ಮುಕ್ಕಿಸಿ ನನ್ನ ಹಲ್ಲುಗಳನ್ನು ಮುರಿದುಹಾಕಿದ್ದಾನೆ. ಆತನು ನನ್ನನ್ನು ಧೂಳಿಗೆ ಹಾಕಿ ತುಳಿದಿದ್ದಾನೆ. |
|
| 17 |
|
| ಇನ್ನೆಂದಿಗೂ ಸಮಾಧಾನವೇ ಇರುವುದಿಲ್ಲವೆಂದುಕೊಂಡೆನು. ನಾನು ಸಂತೋಷವನ್ನು ಮರೆತುಬಿಟ್ಟೆನು. |
|
| 18 |
|
| ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು. |
|
| 19 |
|
| ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ. |
|
| 20 |
|
| ನನ್ನ ಸಂಕಷ್ಟಗಳನ್ನೆಲ್ಲ ನಾನು ಚೆನ್ನಾಗಿ ಜ್ಞಾಪಿಸಿಕೊಳ್ಳುವೆನು, ಆದ್ದರಿಂದ ನಾನು ತುಂಬಾ ವ್ಯಸನಗೊಂಡಿದ್ದೇನೆ. |
|
| 21 |
|
| ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನೆಂದರೆ: |
|
| 22 |
|
| ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ. |
|
| 23 |
|
| ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು! |
|
| 24 |
|
| ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು; ಆದ್ದರಿಂದ ನಾನು ಆತನಲ್ಲಿ ಭರವಸವಿಡುವೆನು” ಎಂದುಕೊಳ್ಳುವೆನು. |
|
| 25 |
|
| ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ. |
|
| 26 |
|
| ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು. |
|
| 27 |
|
| ಯೌವನದಲ್ಲೇ ಸಂಕಟದ ನೊಗವನ್ನು ಹೊರುವುದು ಮನುಷ್ಯನಿಗೆ ಒಳ್ಳೆಯದು. |
|
| 28 |
|
| ಯೆಹೋವನು ಈ ಸಂಕಟದ ನೊಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು. |
|
| 29 |
|
| ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು. |
|
| 30 |
|
| ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು. |
|
| 31 |
|
| ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು. |
|
| 32 |
|
| ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ. |
|
| 33 |
|
| ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ. |
|
| 34 |
|
| ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ. |
|
| 35 |
|
| ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. ಆದರೆ ಕೆಲವರು ಆ ಕೆಟ್ಟಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ. |
|
| 36 |
|
| ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ. |
|
| 37 |
|
| ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ. |
|
| 38 |
|
| ಕೆಟ್ಟವುಗಳೂ ಸಂಭವಿಸುವಂತೆ ಮಹೋನ್ನತನಾದ ಯೆಹೋವನು ಆಜ್ಞಾಪಿಸುತ್ತಾನೆ. |
|
| 39 |
|
| ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು. |
|
| 40 |
|
| ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. ಬಳಿಕ ಯೆಹೋವನಿಗೆ ಅಭಿಮುಖರಾಗೋಣ. |
|
| 41 |
|
| ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿಹಿಡಿಯೋಣ. |
|
| 42 |
|
| “ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ. |
|
| 43 |
|
| ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟೆ. ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದುಹಾಕಿದೆ! |
|
| 44 |
|
| ನೀನು ನಿನಗೆ ಮೋಡಗಳನ್ನು ಹೊದಿಸಿಕೊಂಡು ನಮ್ಮ ಯಾವ ಪ್ರಾರ್ಥನೆಯೂ ನಿನ್ನ ಬಳಿಗೆ ಬಾರದಂತೆ ಮಾಡಿದೆ. |
|
| 45 |
|
| ನೀನು ನಮ್ಮನ್ನು ಇತರ ಜನಾಂಗಗಳಿಗೆ ಕಸದಂತೆಯೂ ಹೊಲಸಿನಂತೆಯೂ ಮಾಡಿದೆ. |
|
| 46 |
|
| ನಮ್ಮ ಶತ್ರುಗಳೆಲ್ಲಾ ನಮ್ಮೊಂದಿಗೆ ಕೋಪದಿಂದ ಮಾತಾಡುತ್ತಾರೆ. |
|
| 47 |
|
| ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!” |
|
| 48 |
|
| ನನ್ನ ಕಣ್ಣೀರು ತೊರೆಗಳಂತೆ ಹರಿಯುತ್ತಿದೆ! ನನ್ನ ಜನರು ನಾಶವಾದ ಕಾರಣ ನಾನು ಗೋಳಾಡುತ್ತಿರುವೆ! |
|
| 49 |
|
| 9ನನ್ನ ಕಣ್ಣೀರು ಸತತವಾಗಿ ಹರಿಯುತ್ತಿದೆ! ನಾನು ಗೋಳಾಡುತ್ತಲೇ ಇರುವೆನು! |
|
| 50 |
|
| ಯೆಹೋವನೇ, ಕೆಳಗಿರುವ ನಮ್ಮನ್ನು ನೀನು ಬಗ್ಗಿ ನೋಡುವತನಕ ನಾನು ಗೋಳಾಡುತ್ತಲೇ ಇರುವೆನು! ನೀನು ಪರಲೋಕದಿಂದ ನಮ್ಮನ್ನು ನೋಡುವತನಕ ನಾನು ಗೋಳಾಡುತ್ತಲೇ ಇರುವೆನು. |
|
| 51 |
|
| ನನ್ನ ಪಟ್ಟಣದ ಯುವತಿಯರಿಗೆ ಸಂಭವಿಸಿದ್ದನ್ನು ನಾನು ನೋಡುವಾಗಲೆಲ್ಲ ನನ್ನ ಕಣ್ಣುಗಳು ನನ್ನನ್ನು ದುಃಖಗೊಳಿಸುತ್ತವೆ. |
|
| 52 |
|
| ನಿಷ್ಕಾರಣವಾಗಿ ಜನರು ನನ್ನ ವೈರಿಗಳಾಗಿದ್ದು ನನ್ನನ್ನು ಪಕ್ಷಿಯಂತೆ ಬೇಟೆಯಾಡಿದರು. |
|
| 53 |
|
| ನನ್ನ ಪ್ರಾಣವನ್ನು ಒಂದು ಗುಂಡಿಯಲ್ಲಿ ಕೊನೆಗಾಣಿಸಲು ಅವರು ಪ್ರಯತ್ನಿಸಿದರು. ಅವರು ನನಗೆ ಕಲ್ಲುಗಳನ್ನು ತೂರಿದರು. |
|
| 54 |
|
| ನೀರು ನನ್ನ ತಲೆಯ ಮೇಲೆ ಏರಿತು. “ನಾನು ಸತ್ತುಹೋಗುತ್ತೇನೆ” ಎಂದುಕೊಂಡೆನು. |
|
| 55 |
|
| ಯೆಹೋವನೇ, ಗುಂಡಿಯ ತಳದಿಂದ ನಾನು ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು. |
|
| 56 |
|
| ನೀನು ನನ್ನ ಸ್ವರವನ್ನು ಕೇಳಿದೆ. ನೀನು ನಿನ್ನ ಕಿವಿಗಳನ್ನು ಮುಚ್ಚಿಕೊಳ್ಳಲಿಲ್ಲ; ನಿನ್ನನ್ನು ರಕ್ಷಿಸುವುದಿಲ್ಲ ಎಂದು ಹೇಳಲಿಲ್ಲ. |
|
| 57 |
|
| ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ. |
|
| 58 |
|
| ಯೆಹೋವನೇ, ನೀನು ನನ್ನ ಪರವಾಗಿ ಹೋರಾಡಿದೆ. ನನ್ನ ಪ್ರಾಣವನ್ನು ರಕ್ಷಿಸಿದೆ. |
|
| 59 |
|
| ಯೆಹೋವನೇ, ನನಗಾಗಿರುವ ಅನ್ಯಾಯವನ್ನು ನೀನು ನೋಡಿರುವೆ. ವ್ಯಾಜ್ಯದಲ್ಲಿ ನನ್ನ ಪರವಾಗಿ ತೀರ್ಪು ನೀಡು. |
|
| 60 |
|
| ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು. |
|
| 61 |
|
| ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ ಎಲ್ಲಾ ಯೋಜನೆಗಳನ್ನು ಕೇಳು. |
|
| 62 |
|
| ನನ್ನ ಶತ್ರುಗಳ ಮಾತುಗಳು ಮತ್ತು ಆಲೋಚನೆಗಳು ಯಾವಾಗಲೂ ನನಗೆ ವಿರೋಧವಾಗಿವೆ. |
|
| 63 |
|
| ಯೆಹೋವನೇ, ನೋಡು! ಅವರು ಕುಳಿತುಕೊಂಡಿರುವಾಗಲೂ ನಿಂತುಕೊಂಡಿರುವಾಗಲೂ ನನ್ನನ್ನು ಹೇಗೆ ಗೇಲಿ ಮಾಡುತ್ತಾರೆ! |
|
| 64 |
|
| ಯೆಹೋವನೇ, ನೀನು ಅವರಿಗೆ ಮುಯ್ಯಿತೀರಿಸು! ಅವರು ಮಾಡಿರುವುದಕ್ಕೆ ತಕ್ಕಂತೆ ಅವರನ್ನು ದಂಡಿಸು! |
|
| 65 |
|
| ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು! |
|
| 66 |
|
| ಕೋಪದಿಂದ ಅವರನ್ನು ಓಡಿಸಿಬಿಡು! ಅವರನ್ನು ನಾಶಮಾಡು! ಯೆಹೋವನೇ, ಅವರನ್ನು ಈ ಭೂಲೋಕದಿಂದಲೇ ಅಳಿಸಿಹಾಕು! |
|
|
|
|