|
| 1 |
|
| ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು. |
|
| 2 |
|
| ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ. |
|
| 3 |
|
| ನಾವು ಅನಾಥರಾಗಿದ್ದೇವೆ. ನಮಗೆ ತಂದೆಯೇ ಇಲ್ಲ. ನಮ್ಮ ತಾಯಂದಿರು ವಿಧವೆಗಳಂತಾಗಿದ್ದಾರೆ. |
|
| 4 |
|
| ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ. |
|
| 5 |
|
| ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ. |
|
| 6 |
|
| ನಾವು ಈಜಿಪ್ಟಿನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡೆವು. ಸಾಕಷ್ಟು ಆಹಾರಕ್ಕಾಗಿ ನಾವು ಅಸ್ಸೀರಿಯಾದೊಡನೆ ಒಪ್ಪಂದ ಮಾಡಿಕೊಂಡೆವು. |
|
| 7 |
|
| ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ. |
|
| 8 |
|
| ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು. |
|
| 9 |
|
| ಆಹಾರಕ್ಕಾಗಿ ನಾವು ನಮ್ಮ ಪ್ರಾಣಗಳನ್ನೇ ಆಪತ್ತಿಗೆ ಗುರಿ ಮಾಡಿಕೊಳ್ಳುತ್ತೇವೆ. ಊರ ಹೊರಗೆ ಖಡ್ಗಗಳನ್ನು ಹಿಡಿದುಕೊಂಡಿರುವ ಜನರಿದ್ದಾರೆ. |
|
| 10 |
|
| ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ. |
|
| 11 |
|
| “ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ. |
|
| 12 |
|
| ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ. |
|
| 13 |
|
| ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸಧಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗರಿಸಿದ್ದಾರೆ. |
|
| 14 |
|
| ಪಟ್ಟಣದ ದ್ವಾರಗಳ ಬಳಿಯಿಂದ ಹಿರಿಯರು ಹೊರಟುಹೋಗಿದ್ದಾರೆ. ಯುವಕರು ಸಂಗೀತ ನುಡಿಸುವುದನ್ನು ನಿಲ್ಲಿಸಿದ್ದಾರೆ. |
|
| 15 |
|
| ನಮ್ಮ ಹೃದಯಗಳಲ್ಲಿ ಆನಂದವೇ ಉಳಿದಿಲ್ಲ. ನಮ್ಮ ನರ್ತನದ ಸ್ಥಾನವನ್ನು ಗೋಳಾಟವು ಆವರಿಸಿಕೊಂಡಿದೆ. |
|
| 16 |
|
| ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ. |
|
| 17 |
|
| “ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ. |
|
| 18 |
|
| ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ. |
|
| 19 |
|
| ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲವಿರುವುದು. |
|
| 20 |
|
| ಯೆಹೋವನೇ, ನೀನು ನಮ್ಮನ್ನು ಶಾಶ್ವತವಾಗಿ ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದುಬಿಟ್ಟಿರುವುದೇಕೆ? |
|
| 21 |
|
| “ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು. |
|
| 22 |
|
| ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ. |
|
|
|
|