ಪರಿಶುದ್ದ ಬೈಬಲ್ 1997
|
| 1 |
| ಯೆಹೋವನ ನುಡಿಯು ನನಗೆ ಘಂತು. ಆತನು ಹೇಳಿದ್ದೇನೆಂದರೆ, |
| 2 |
| “ನರಪುತ್ರನೇ, ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ. |
| 3 |
| ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಘಹುದೋ? ಇಲ್ಲ. ಅದನ್ನು ಗೂಟವನ್ನಾಗಿ ಮಾಡಿ ಅದರಲ್ಲಿ ಪಾತ್ರೆಗಳನ್ನು ತೂಗುಹಾಕಘಹುದೋ? ಇಲ್ಲ. |
| 4 |
| ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಘಹುದೋ? |
| 5 |
| ಅದು ಸುಡುವ ಮೊದಲು ಅದರಿಂದ ಏನನ್ನೂ ಮಾಡಲಿಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲಿಕ್ಕಾಗುವುದಿಲ್ಲ. |
| 6 |
| ದ್ರಾಕ್ಷಿಬಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಙೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ. |
| 7 |
| “ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ. |
| 8 |
| ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಊಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada/ezekiel/015.mp3
48
15