“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.”‘
ಆಮೇಲೆ ನಿನ್ನನ್ನು ಒಣನೆಲದ ಮೇಲೆ ಹಾಕುವೆನು. ಹೊಲದ ಮೇಲೆ ನಿನ್ನನ್ನು ಬಿಸಾಡುವೆನು. ಎಲ್ಲಾ ಪಕ್ಷಿಗಳು ನಿನ್ನನ್ನು ತಿಂದುಬಿಡುವಂತೆ ಮಾಡುವೆನು. ಎಲ್ಲಾ ಕಡೆಗಳಿಂದ ಕಾಡುಮೃಗಗಳು ಬಂದು ನಿನ್ನನ್ನು ಹೊಟ್ಟೆತುಂಬಾ ತಿನ್ನುವಂತೆ ಮಾಡುವೆನು.
ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಘಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.”
ಈಜಿಪ್ಟಿನ ಹೊಳೆಯ ತೀರದಲ್ಲಿ ಅನೇಕ ಪ್ರಾಣಿಗಳಿವೆ. ನಾನು ಅವುಗಳನ್ನು ನಾಶಮಾಡುವೆನು. ಜನರು ಹೊಳೆಯ ನೀರನ್ನು ತಮ್ಮ ಕಾಲುಗಳಿಂದ ಕೆಸರಾಗಿ ಇನ್ನು ಮಾಡಲಾರರು. ದನಗಳ ಗೊರಸುಗಳು ನೀರನ್ನು ಕೆಸರನ್ನಾಗಿ ಮಾಡುವದಿಲ್ಲ.
“ಈಜಿಪ್ಟ್ ದೇಶವನ್ನು ನಾನು ಬರಿದುಮಾಡುವೆನು. ಆ ದೇಶವು ಎಲ್ಲವನ್ನು ಕಳೆದುಕೊಳ್ಳುವದು. ಈಜಿಪ್ಟಿನಲ್ಲಿ ವಾಸಿಸುವ ಎಲ್ಲಾ ಜನರನ್ನು ನಾನು ಶಿಕ್ಷಿಸುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ತಿಳುಕೊಳ್ಳುವರು.
“ಜನರು ಈಜಿಪ್ಟಿನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು. ಬೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕಗೀತೆಯನ್ನು ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಈ ಶೋಕಗೀತೆಯನ್ನು ಹಾಡುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.
“ಅಶ್ಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶ್ಶೂರದ ಸೈನಿಕರೆಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಊಗಳು ಅಶ್ಶೂರದ ಸಮಾಊಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರೆಲ್ಲಾ ಯುದ್ಧದಲ್ಲಿ ಸತ್ತರು. (Verses 22-23)
“ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಊಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.
ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನ್ನು ಸಿದ್ಧಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಊಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನ್ನು ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಸತ್ತವರೊಂದಿಗೆ ಸೇರಿರುತ್ತಾರೆ.
“ಮೆಷಕ್, ತೂಘಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಊಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನ್ನುಟುಮಾಡಿದ್ದರು.
ಈಗ ಅವರು ಘಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು.
“ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಘಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ.
“ಪಾತಾಳಕ್ಕೆ ಸೇರಿದ ಜನರನ್ನು ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.
“ಫರೋಹನು ತನ್ನ ಕಾಲದಲ್ಲಿ ಜನರನ್ನು ಭಯಗೊಳಿಸಿದ್ದನು. ಈಗಲಾದರೋ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.