ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
|
| 1 |
| ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: |
| 2 |
| “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. |
| 3 |
| ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು |
| 4 |
| ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’ |
| 5 |
| ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು. |
| 6 |
| ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ. |
| 7 |
| “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು. |
| 8 |
| “ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು. |
| 9 |
| ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.” |
| 10 |
| ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು. |
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannadairv/jonah/002.mp3
4
2