ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
|
| 1 |
| ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ. |
| 2 |
| ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ. |
| 3 |
| ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ. |
| 4 |
| ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ. |
| 5 |
| ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ. |
| 6 |
| ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು. |
| 7 |
| ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು. |
| 8 |
| ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು. |
| 9 |
| ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು. |
| 10 |
| ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು. |
| 11 |
| ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು. |
| 12 |
| ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ. |
| 13 |
| ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ? |
| 14 |
| ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ? |
| 15 |
| ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ? |
| 16 |
| ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ. |
| 17 |
| ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ? |
|
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannadairv/habakkuk/001.mp3
3
1