ಕನ್ನಡ ಸಮಕಾಲಿಕ ಅನುವಾದ
|
| 1 |
| ಶಿಗ್ಯೋನೋತ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. |
| 2 |
| ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ. |
| 3 |
| ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು. |
| 4 |
| ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು. ಕಿರಣಗಳು ಅವರ ಹಸ್ತಗಳಿಂದ ಮಿಂಚಿದವು. ಅದರಲ್ಲಿ ಅವರ ಬಲ ಅಡಗಿತ್ತು. |
| 5 |
| ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು. |
| 6 |
| ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ. |
| 7 |
| ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು. |
| 8 |
| ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ? |
| 9 |
| ನಿನ್ನ ಬಿಲ್ಲನ್ನು ಹೊರ ತೆಗೆದಿ, ಅನೇಕ ಬಾಣಗಳಿಗಾಗಿ ಕರೆ ಕೊಟ್ಟಿದ್ದಿ, ಭೂಮಿಯನ್ನು ನದಿಗಳಿಂದ ಸೀಳಿಬಿಡುವೆ. |
| 10 |
| ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ. |
| 11 |
| ನಿನ್ನ ಹಾರುವ ಬಾಣಗಳ ಬೆಳಗಿಗೂ, ನಿನ್ನ ಮಿಂಚುವ ಈಟಿಯ ಹೊಳಪಿಗೂ ಸೂರ್ಯ ಚಂದ್ರರು ಆಕಾಶದಲ್ಲಿ ಸ್ಥಿರವಾಗಿದ್ದಾರೆ. |
| 12 |
| ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ, ಕೋಪದಿಂದ ಜನಾಂಗಗಳನ್ನು ತುಳಿದು ಹಾಕಿದ್ದೀಯೆ. |
| 13 |
| ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ. |
| 14 |
| ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ? |
| 15 |
| ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ, ಮಹಾಜಲಗಳ ಸಮೂಹದಲ್ಲಿಯೂ ನಡೆದು ಹೋದೆ. |
| 16 |
| ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು. |
| 17 |
| ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ, |
| 18 |
| ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು. |
| 19 |
| ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. |
|
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannada2022/habakkuk/003.mp3
3
3