ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
|
| 1 |
| ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು. |
| 2 |
| ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. |
| 3 |
| ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು. |
| 4 |
| ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ? |
| 5 |
| ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ? |
| 6 |
| ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು. |
| 7 |
| ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು. |
| 8 |
| ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು. |
| 9 |
| ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. |
| 10 |
| ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು. |
| 11 |
| ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. |
| 12 |
| ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು. |
| 13 |
| ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. |
| 14 |
| ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, |
| 15 |
| “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ |
| 16 |
| ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು. |
| 17 |
| ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು. |
| 18 |
| ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು. |
| 19 |
| ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು. |
| 20 |
| ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು, |
| 21 |
| “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. |
| 22 |
| ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು. |
| 23 |
| ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, |
| 24 |
| “ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು. |
| 25 |
| ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು. |
| 26 |
| ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು. |
| 27 |
| ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು. |
| 28 |
| ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು. |
| 29 |
| ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು. |
| 30 |
| ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು. |
| 31 |
| ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು. |
| 32 |
| ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು. |
| 33 |
| ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು. |
| 34 |
| ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು. |
| 35 |
| ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. |
| 36 |
| ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು. |
| 37 |
| ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ. |
| 38 |
| ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು. |
|
| ಟಿಪ್ಪಣಿಗಳನ್ನು ಉಳಿಸಿ |
https://beblia.bible:81/BibleAudio/kannadairv/matthew/009.mp3
28
9