× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ERV ೨೦೦೭ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೊರಿಂಥಿಯರಿಗೆ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ 1934 ಕೊರಿಂಥಿಯರಿಗೆ ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.೨ [2]ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.೩ [3]ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ.೪ [4]ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.೫ [5]ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ.೬ [6]ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.೭ [7]ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.೮ [8]ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.೯ [9]ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.೧೦ [10]ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.೧೧ [11]ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.೧೨ [12]ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.೧೩ [13]ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ. (Verses 13-14)೧೪ [14]See verse 13೧೫ [15]ನಾನು ಈ ಎಲ್ಲಾ ವಿಷಯಗಳಲ್ಲಿ ಬಹು ಭರವಸೆ ಉಳ್ಳವನಾಗಿದ್ದೆನು. ಆದ್ದರಿಂದ ನಿಮ್ಮನ್ನು ಮೊದಲು ಸಂದರ್ಶಿಸಲು ನಾನು ಯೋಜನೆಗಳನ್ನು ಮಾಡಿದೆನು. ಆಗ ನಿಮಗೆ ಎರಡು ಸಲ ಆಶೀರ್ವಾದವಾಗಬಹುದಿತ್ತು.೧೬ [16]ನಾನು ಮಕೆದೋನಿಯಕ್ಕೆ ಹೋಗುವಾಗಲೂ ಬಳಿಕ ಅಲ್ಲಿಂದ ಹಿಂತಿರುಗಿ ಬರುವಾಗಲೂ ನಿಮ್ಮ ಬಳಿಗೆ ಬರಬೇಕೆಂದಿದ್ದೆ. ಜುದೇಯಕ್ಕೆ ಪ್ರವಾಸ ಕೈಕೊಳ್ಳಲು ನಿಮ್ಮಿಂದ ಸಹಾಯವನ್ನು ಪಡೆದುಕೊಳ್ಳಬೇಕೆಂದಿದ್ದೆ.೧೭ [17]ನಾನು ಆ ಯೋಜನೆಗಳನ್ನು ಮಾಡಿದಾಗ ನಿಮ್ಮ ಬಳಿಗೆ ಬರುವ ಉದ್ದೇಶ ನಿಜವಾಗಿಯೂ ನನಗಿರಲಿಲ್ಲವೆಂದು ಯೋಚಿಸುತ್ತೀರಾ? ನಾನು ಪ್ರಾಪಂಚಿಕರಂತೆ ಯೋಜನೆಗಳನ್ನು ಮಾಡಿದೆನೋ? ಅವರಾದರೋ ಯೋಜನೆಗಳನ್ನು ಮಾಡುವಾಗ “ಹೌದು, ಹೌದು” ಎಂತಲೂ ಅದೇ ಸಮಯದಲ್ಲಿ “ಇಲ್ಲ, ಇಲ್ಲ” ಎಂತಲೂ ಹೇಳುತ್ತಾರೆ.೧೮ [18]ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.೧೯ [19]ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.೨೦ [20]ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.೨೧ [21]ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ.೨೨ [22]ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.೨೩ [23]ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.೨೪ [24]ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.Kannada Bible 1934 Public Domain: 1934 ಕನ್ನಡ ಬೈಬಲ್ 1934 ಕೊರಿಂಥಿಯರಿಗೆ ೨ ೧ 00:00:00 00:00:00 0.5x 2.0x https://beblia.bible:81/BibleAudio/kannada/2corinthians/001.mp3 13 1