× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಗಲಾತ್ಯರಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಪರಿಶುದ್ದ ಬೈಬಲ್ 1997 ಗಲಾತ್ಯರಿಗೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ.೨ [2]ನಾನು ಮತ್ತು ನನ್ನೊಂದಿಗಿರುವ ಎಲ್ಲಾ ಸಹೋದರರು ಈ ಪತ್ರವನ್ನು ಗಲಾತ್ಯದಲ್ಲಿರುವ ಸಭೆಗಳವರಿಗೆ ಬರೆದಿದ್ದೇವೆ.೩ [3]ನಮ್ಮ ತಂದೆಯಾದ ದೇವರೂ ಪ್ರಭುವಾದ ಯೇಸು ಕ್ರಿಸ್ತನೂ ನಿಮಗೆ ಕೃಪೆ ತೋರಲಿ ಮತ್ತು ಶಾಂತಿಕೊಡಲಿ ಎಂದು ನಾವು ಪ್ರಾರ್ಥಿಸುತ್ತೇವೆ.೪ [4]ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.೫ [5]ಎಂದೆಂದಿಗೂ ದೇವರಿಗೆ ಮಹಿಮೆಯಾಗಲಿ. ಆಮೆನ್.೬ [6]ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.೭ [7]ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ.೮ [8]ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ.೯ [9]ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ.೧೦ [10]ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.೧೧ [11]ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ.೧೨ [12]ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.೧೩ [13]ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.೧೪ [14]ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.೧೫ [15]ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.೧೬ [16]ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.೧೭ [17]ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.೧೮ [18]ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು.೧೯ [19]ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.೨೦ [20]ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ.೨೧ [21]ತರುವಾಯ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.೨೨ [22]ಕ್ರಿಸ್ತನಲ್ಲಿರುವ ಜುದೇಯದ ಸಭೆಗಳವರು ನನ್ನನ್ನು ಹಿಂದೆಂದೂ ಭೇಟಿಯಾಗಿರಲಿಲ್ಲ.೨೩ [23]“ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು.೨೪ [24]ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಗಲಾತ್ಯರಿಗೆ ೧ 00:00:00 00:00:00 0.5x 2.0x https://beblia.bible:81/BibleAudio/kannada/galatians/001.mp3 6 1