× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ERV ೨೦೦೭ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಎಫೆಸಿಯರಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨1 1 1 ಕನ್ನಡ ಬೈಬಲ್ 1934 ಎಫೆಸಿಯರಿಗೆ ೪ ಟಿಪ್ಪಣಿಗಳನ್ನು ಉಳಿಸಿ ೧ [1]ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.೨ [2]ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.೩ [3]ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ.೪ [4]ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.೫ [5]ಒಬ್ಬನೇ ಪ್ರಭು, ಒಂದೇ ನಂಬಿಕೆ, ಒಂದೇ ದೀಕ್ಷಾಸ್ನಾನ.೬ [6]ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಸಮಸ್ತವನ್ನೂ ಆಳುತ್ತಾನೆ. ಆತನು ಸರ್ವವ್ಯಾಪಿಯಾಗಿದ್ದಾನೆ ಮತ್ತು ಎಲ್ಲರಲ್ಲಿ ವಾಸಿಸುವವನಾಗಿದ್ದಾನೆ.೭ [7]ಕ್ರಿಸ್ತನು ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಶೇಷವಾದ ವರವನ್ನು ಕೊಟ್ಟಿದ್ದಾನೆ. ಪ್ರತಿಯೊಬ್ಬನು ಕ್ರಿಸ್ತನ ಇಷ್ಟಾನುಸಾರವಾಗಿ ವರವನ್ನು ಪಡೆದುಕೊಂಡಿದ್ದಾನೆ.೮ [8]ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ:೯ [9]“ಆತನು ಉನ್ನತಸ್ಥಾನಕ್ಕೆ ಏರಿಹೋದನು” ಎಂದರೆ ಆತನು ಭೂಲೋಕಕ್ಕೆ ಇಳಿದುಬಂದು,೧೦ [10]ಭೂಮಿಯ ಅಧೋಭಾಗಕ್ಕೆ ಇಳಿದುಹೋಗಿ, ಅಲ್ಲಿಂದ ಆಕಾಶದ ಅತ್ಯುನ್ನತಸ್ಥಾನಕ್ಕೆ ಏರಿಹೋದನು ಎಂದರ್ಥ. ಸಮಸ್ತದಲ್ಲಿ ತಾನೇ ತುಂಬಿರಬೇಕೆಂದು ಕ್ರಿಸ್ತನು ಹಾಗೆ ಮಾಡಿದನು.೧೧ [11]ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.೧೨ [12]ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.೧೩ [13]ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.೧೪ [14]ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.೧೫ [15]ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ.೧೬ [16]ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ.೧೭ [17]ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.೧೮ [18]ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ.೧೯ [19]ಅವರಿಗೆ ನಾಚಿಕೆಯೇ ಇಲ್ಲ. ಅವರು ತಮ್ಮ ಜೀವಿತಗಳನ್ನು ದುಷ್ಕೃತ್ಯಗಳಿಗೆ ಉಪಯೋಗಿಸುತ್ತಾರೆ; ಎಲ್ಲಾ ಬಗೆಯ ಕೆಟ್ಟಕಾರ್ಯಗಳನ್ನು ಇನ್ನೂ ಹೆಚ್ಚೆಚ್ಚಾಗಿ ಮಾಡಲು ತವಕಪಡುತ್ತಾರೆ.೨೦ [20]ಆದರೆ ಕ್ರಿಸ್ತನಿಂದ ನೀವು ಕಲಿತುಕೊಂಡದ್ದು ಅವುಗಳನ್ನಲ್ಲ.೨೧ [21]ನೀವು ಆತನ ವಿಷಯವಾಗಿ ಕೇಳಿದ್ದೀರೆಂಬುದು ನನಗೆ ಗೊತ್ತಿದೆ. ನೀವು ಆತನಲ್ಲಿರುವುದರಿಂದ ಸತ್ಯವನ್ನು ಕಲಿತುಕೊಂಡಿರಿ. ಹೌದು, ಸತ್ಯವು ಯೇಸುವಿನಲ್ಲಿದೆ.೨೨ [22]ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.೨೩ [23]ಆದರೆ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಹೊಂದಿಕೊಳ್ಳತಕ್ಕ ರೀತಿಯನ್ನು ನೀವು ಕಲಿತುಕೊಂಡಿರಿ.೨೪ [24]ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.೨೫ [25]ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.೨೬ [26]ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ.೨೭ [27]ನಿಮ್ಮನ್ನು ಸೋಲಿಸಲು ಸೈತಾನನಿಗೆ ಅವಕಾಶಕೊಡಬೇಡಿ.೨೮ [28]ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.೨೯ [29]ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.೩೦ [30]ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.೩೧ [31]ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.೩೨ [32]ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.Kannada Bible 1934 Public Domain: 1934 ಕನ್ನಡ ಬೈಬಲ್ 1934 ಎಫೆಸಿಯರಿಗೆ ೪ 00:00:00 00:00:00 0.5x 2.0x https://beblia.bible:81/BibleAudio/kannada/ephesians/004.mp3 6 4