× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ERV ೨೦೦೭ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹಿಬ್ರಿಯರಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೨ ೧೨೩೪೫೬೭೮೯೧೦೧೧೧೨೧೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ 1934 ಹಿಬ್ರಿಯರಿಗೆ ೧೨ ಟಿಪ್ಪಣಿಗಳನ್ನು ಉಳಿಸಿ ೧ [1]ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.೨ [2]ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.೩ [3]ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.೪ [4]ನೀವು ಪಾಪದ ವಿರುದ್ಧ ಹೋರಾಡುತ್ತಿದ್ದರೂ ನಿಮ್ಮ ಹೋರಾಟಗಳು ನಿಮ್ಮನ್ನು ಸಾವಿನ ಸಮೀಪಕ್ಕೆ ಇನ್ನೂ ತಂದಿಲ್ಲ.೫ [5]ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ:೬ [6]ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ;೭ [7]ಆದ್ದರಿಂದ ತಂದೆಯು ನೀಡುವ ದಂಡನೆ ಎಂಬುದಾಗಿ ಅವುಗಳನ್ನು ಸಹಿಸಿಕೊಳ್ಳಿ. ತಂದೆಯು ತನ್ನ ಮಕ್ಕಳನ್ನು ದಂಡಿಸುವಂತೆ ದೇವರು ನಿಮ್ಮನ್ನು ಈ ರೀತಿ ಶಿಕ್ಷಿಸುತ್ತಾನೆ. ಎಲ್ಲಾ ಮಕ್ಕಳು ತಮ್ಮ ತಂದೆಗಳಿಂದ ಶಿಕ್ಷಿಸಲ್ಪಡುತ್ತಾರೆ.೮ [8]ನೀವು ಎಂದೂ ಶಿಕ್ಷಿಸಲ್ಪಡದಿದ್ದರೆ ನಿಮ್ಮ ತಂದೆಗೆ ನೀವು ನಿಜವಾದ ಮಕ್ಕಳಲ್ಲ.೯ [9]ಈ ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು.೧೦ [10]ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.೧೧ [11]ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ಆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.೧೨ [12]ನೀವು ದುರ್ಬಲರಾಗಿದ್ದೀರಿ. ಆದ್ದರಿಂದ ನಿಮ್ಮನ್ನು ಮತ್ತೆ ಬಲಪಡಿಸಿಕೊಳ್ಳಿರಿ.೧೩ [13]ನೀವು ಯೋಗ್ಯವಾದ ಮಾರ್ಗದಲ್ಲಿ ಜೀವಿಸಿದರೆ ರಕ್ಷಣೆ ಹೊಂದುವಿರಿ ಮತ್ತು ನಿಮ್ಮನ್ನು ನಾಶಗೊಳಿಸಲು ನಿಮ್ಮ ಬಲಹೀನತೆಗಳಿಗೆ ಸಾಧ್ಯವಾಗುವುದಿಲ್ಲ.೧೪ [14]ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.೧೫ [15]ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.೧೬ [16]ನಿಮ್ಮಲ್ಲಿ ಯಾರೂ ಲೈಂಗಿಕಪಾಪ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.೧೭ [17]ನಿಮಗೇ ತಿಳಿದಿರುವಂತೆ, ಆ ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ.೧೮ [18]ನೀವು ಒಂದು ಹೊಸ ಸ್ಥಳಕ್ಕೆ ಬಂದಿರುವಿರಿ. ಅದು ಇಸ್ರೇಲಿನ ಜನರು ಬಂದ ಬೆಟ್ಟದ ಸ್ಥಳವಲ್ಲ. ಮುಟ್ಟುವುದಕ್ಕೆ ಸಾಧ್ಯವಾಗುವಂತಹ ಮತ್ತು ಬೆಂಕಿ ಹತ್ತಿಕೊಂಡಿರುವಂತಹ ಬೆಟ್ಟದ ಬಳಿಗೆ ನೀವು ಬಂದಿಲ್ಲ. ನೀವು ಕಗ್ಗತ್ತಲೆ, ದುಃಖ ಮತ್ತು ಬಿರಗಾಳಿಯ ಬಳಿಗೆ ಬಂದಿಲ್ಲ.೧೯ [19]ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.೨೦ [20]“ಆ ಬೆಟ್ಟವನ್ನು ಮುಟ್ಟುವ ಏನನ್ನಾದರೂ ಸರಿ, ಅದು ಒಂದು ಪ್ರಾಣಿಯಾಗಿದ್ದರೂ ಅದನ್ನು ಕಲ್ಲೆಸೆದು ಕೊಂದುಹಾಕಿರಿ” ಎಂಬ ಆಜ್ಞೆಯನ್ನು ಕೇಳಲು ಅವರು ಇಷ್ಟಪಡಲಿಲ್ಲ.೨೧ [21]ಆ ಜನರು ಅಂದು ಕಂಡದ್ದು ಭಯಂಕರವಾಗಿದ್ದುದರಿಂದ ಮೋಶೆಯು, “ನಾನು ಭಯದಿಂದ ನಡುಗುತ್ತಿದ್ದೇನೆ” ಎಂದು ಹೇಳಿದನು.೨೨ [22]ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.೨೩ [23]ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.೨೪ [24]ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.೨೫ [25]ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?೨೬ [26]ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” ಎಂದು ವಾಗ್ದಾನ ಮಾಡಿದ್ದಾನೆ.೨೭ [27]“ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.೨೮ [28]ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.೨೯ [29]ಏಕೆಂದರೆ ನಮ್ಮ ದೇವರು ನಾಶಮಾಡುವ ಬೆಂಕಿಯಂತಿದ್ದಾನೆ.Kannada Bible 1934 Public Domain: 1934 ಕನ್ನಡ ಬೈಬಲ್ 1934 ಹಿಬ್ರಿಯರಿಗೆ ೧೨ 00:00:00 00:00:00 0.5x 2.0x https://beblia.bible:81/BibleAudio/kannada/hebrews/012.mp3 13 12