× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಪೇತ್ರನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಪರಿಶುದ್ದ ಬೈಬಲ್ 1997 ಪೇತ್ರನು ೧ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಎಂಬ ಪ್ರದೇಶಗಳಲ್ಲಿ ಚದರಿಹೋಗಿ ಪ್ರವಾಸಿಗಳಾದ ದೇವಜನರಿಗೆ ಬರೆಯುವ ಪತ್ರ.೨ [2]ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.೩ [3]ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.೪ [4]ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.೫ [5]ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.೬ [6]ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು.೭ [7]ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.೮ [8]ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.೯ [9]ನಿಮ್ಮ ನಂಬಿಕೆಗೆ ಒಂದು ಗುರಿಯಿದೆ. ನಿಮ್ಮ ಆತ್ಮವನ್ನು ರಕ್ಷಿಸಬೇಕೆಂಬುದೇ ಆ ಗುರಿ. ನಿಮ್ಮ ಗುರಿಯಾಗಿರುವ ರಕ್ಷಣೆಯನ್ನು ಹೊಂದಿಕೊಳ್ಳುವಿರಿ.೧೦ [10]ಪ್ರವಾದಿಗಳು ಈ ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು.೧೧ [11]ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.೧೨ [12]ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.೧೩ [13]ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.೧೪ [14]ನೀವು ಮೊದಲು ಈ ಸಂಗತಿಗಳ ಕುರಿತು ಅರ್ಥಮಾಡಿಕೊಳ್ಳದಿದ್ದ ಕಾರಣ, ನೀವು ನಿಮ್ಮ ಇಚ್ಛೆಯಂತೆ ಕೆಟ್ಟಕಾರ್ಯಗಳನ್ನು ಮಾಡಿದಿರಿ. ಆದರೆ ಈಗ ನೀವು ವಿಧೇಯರಾಗಿರುವ ದೇವಮಕ್ಕಳು, ಆದ್ದರಿಂದ ಈಗ ಮೊದಲಿನಂತೆ ಜೀವಿಸಬೇಡಿ.೧೫ [15]ದೇವರು ಪರಿಶುದ್ಧನಾಗಿರುವಂತೆ ನಿಮ್ಮ ನಡೆನುಡಿಗಳು ಪರಿಶುದ್ಧವಾಗಿರಲಿ. ನಿಮ್ಮನ್ನು ಕರೆದಾತನು ದೇವರೇ.೧೬ [16]‘‘ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು’’ ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದೆ.೧೭ [17]ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.೧೮ [18]ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿಬಂಗಾರಗಳಿಂದಲ್ಲ.೧೯ [19]ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.೨೦ [20]ಈ ಲೋಕವು ಸೃಷ್ಟಿಯಾಗುವುದಕ್ಕೆ ಮೊದಲೇ ಕ್ರಿಸ್ತನು ಆರಿಸಲ್ಪಟ್ಟನು. ಆದರೆ ಆತನು ನಿಮಗೋಸ್ಕರ ಈ ಅಂತ್ಯಕಾಲದಲ್ಲಿ ಪ್ರತ್ಯಕ್ಷನಾದನು.೨೧ [21]ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.೨೨ [22]ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.೨೩ [23]ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ.೨೪ [24]ಪವಿತ್ರ ಗ್ರಂಥವು ಹೇಳುವುದೇನೆಂದರೆ,೨೫ [25]ಆದರೆ ದೇವರ ವಾಕ್ಯವು ಎಂದೆಂದಿಗೂ ಜೀವಂತವಾಗಿರುತ್ತದೆ.’’ \rq ಯೆಶಾಯ 40:6-8\rq*Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಪೇತ್ರನು ೧ ೧ 00:00:00 00:00:00 0.5x 2.0x https://beblia.bible:81/BibleAudio/kannada/1peter/001.mp3 5 1