× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಪ್ರಕಟನೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಪರಿಶುದ್ದ ಬೈಬಲ್ 1997 ಪ್ರಕಟನೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.೨ [2]ಯೋಹಾನನು ತಾನು ಕಂಡದ್ದೆಲ್ಲವನ್ನು ತಿಳಿಸಿದನು. ಇದು ಯೇಸು ಕ್ರಿಸ್ತನು ಅವನಿಗೆ ಹೇಳಿದ ಸತ್ಯ. ಇದು ದೇವರಿಂದ ಬಂದ ಸಂದೇಶ.೩ [3]ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.೪ [4]ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು೫ [5]ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;೬ [6]ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.೭ [7]ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.೮ [8]ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”೯ [9]ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.೧೦ [10]ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.೧೧ [11]ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.೧೨ [12]ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು.೧೩ [13]ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.೧೪ [14]ಆತನ ತಲೆಕೂದಲು ಮಂಜಿನಂತೆಯೂ ಉಣ್ಣೆಯಂತೆಯೂ ಬೆಳ್ಳಗಿದ್ದವು; ಕಣ್ಣುಗಳು ಬೆಂಕಿಯ ಜ್ವಾಲೆಯಂತಿದ್ದವು;೧೫ [15]ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತಿದ್ದವು; ಧ್ವನಿಯು ಹರಿಯುವ ನೀರಿನ ಘೋಷದಂತಿತ್ತು.೧೬ [16]ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.೧೭ [17]ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.೧೮ [18]ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.೧೯ [19]ಆದ್ದರಿಂದ ನೀನು ನೋಡಿದ ಸಂಗತಿಗಳನ್ನು ಬರೆ. ಈಗ ಸಂಭವಿಸುವ ಸಂಗತಿಗಳನ್ನು ಮತ್ತು ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಬರೆ.೨೦ [20]ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಪ್ರಕಟನೆ ೧ 00:00:00 00:00:00 0.5x 2.0x https://beblia.bible:81/BibleAudio/kannada/revelation/001.mp3 22 1