× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.೨ [2]ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.೩ [3]ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.೪ [4]ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು.೫ [5]ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು.೬ [6]ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು.೭ [7]ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.೮ [8]ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.೯ [9]ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು.೧೦ [10]ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.೧೧ [11]ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.೧೨ [12]ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು.೧೩ [13]ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು.೧೪ [14]ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು೧೫ [15]ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು.೧೬ [16]ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು.೧೭ [17]ಆ ದೀವಿಗೆಗಳನ್ನು ಆಕಾಶದಲ್ಲಿ ಇಟ್ಟು ಭೂಮಿಗೆ ಬೆಳಕನ್ನೀಯುವಂತೆ ಮಾಡಿದರು. ಹಾಗೂ೧೮ [18]ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.೧೯ [19]ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು.೨೦ [20]ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.೨೧ [21]ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.೨೨ [22]ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು.೨೩ [23]ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು.೨೪ [24]ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು.೨೫ [25]ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.೨೬ [26]ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:೨೭ [27]ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.೨೮ [28]ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.೨೯ [29]ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.೩೦ [30]ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.೩೧ [31]ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/001.mp3 50 1